×
Ad

ರಾಯಚೂರು | ಕಳವಾದ 151 ಮೊಬೈಲ್ ವಾರಸುದಾರರಿಗೆ ಹಸ್ತಾಂತರ

Update: 2025-09-25 19:47 IST

ರಾಯಚೂರು: ನಗರದ ವಿವಿಧ ಬಡಾವಣೆಗಳಲ್ಲಿ ಕಳೆದುಕೊಂಡಿರುವ ಮೊಬೈಲ್‌ಗಳನ್ನು ಸ್ಥಳೀಯ ಪೊಲೀಸರು ಪತ್ತೆಹಚ್ಚಿ ವಾರಸುದಾರರಿಗೆ ಹಿಂತಿರುಗಿಸಿರುವ ಘಟನೆ ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದಿದೆ.

ಸದರ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2024 ಮೇ ರಿಂದ 2025 ಸೆಪ್ಟೆಂಬರ್ ನಡುವೆ ನಡೆದಿದ್ದ 151 ಮೊಬೈಲ್ ಕಳ್ಳತನ ಪ್ರಕರಣಗಳನ್ನು ಪೊಲೀಸರು CEIR (Central Equipment Identity Register) ಪೋರ್ಟಲ್ ಮೂಲಕ ಪತ್ತೆಹಚ್ಚಿದ್ದಾರೆ. ಈ ಕಾರ್ಯಾಚರಣೆಯಿಂದ ಒಟ್ಟಿಗೆ 25,03,057 ರೂ. ಮೌಲ್ಯದ ಮೊಬೈಲ್‌ಗಳನ್ನು ಸರಿ ಪ್ರಾಪ್ತಿಕಾರರಿಗೆ ವಾಪಸ್ ನೀಡಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಪುಟ್ಟಮಾದಯ್ಯ, ಸದರ್ ಬಜಾರ್ ಸಿಪಿಐ ಉಮೇಶ್ ಕಾಂಬ್ಳೆ ಸೇರಿದಂತೆ ವಿವಿಧ ಪೊಲೀಸ್ ಸಿಬ್ಬಂದಿ ಹಾಜರಿದ್ದರು.

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News