ರಾಯಚೂರು | ಅಬಕಾರಿ ಅಧಿಕಾರಿಗಳಿಂದ ದಾಳಿ : 10 ಲೀಟರ್ ಬೆಲ್ಲದ ಕೊಳೆ, 2 ಲೀಟರ್ ಕಳ್ಳಭಟ್ಟಿ ಸಾರಾಯಿ ವಶ
Update: 2025-08-27 21:41 IST
ರಾಯಚೂರು : ಮಸ್ಕಿ ತಾಲೂಕಿನ ಮಾರಲದಿನ್ನಿ ತಾಂಡಾದ ಮನೆಯೊಂದರಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ಸಂಗ್ರಹಿಸಿಟ್ಟಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಲಿಂಗಸುಗೂಗುರು ಅಬಕಾರಿ ಇಲಾಖೆಯ ಅಧಿಕಾರಿಗಳ ತಂಡ ಕಳ್ಳಭಟ್ಟಿ ಸಾರಾಯಿ ಮತ್ತು ಬೆಲ್ಲದ ಕೊಳೆಯನ್ನು ವಶಪಡಿಸಿಕೊಂಡಿದ್ದಾರೆ.
ಜ್ಯೋತಿ ಎಂಬವರ ಮನೆಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿಯನ್ನು ಸಂಗ್ರಹಿಸಿಟ್ಟಿರುವುದಾಗಿ ದೊರೆತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ ಅಧಿಕಾರಿಗಳು 2 ಲೀಟರ್ ಕಳ್ಳಭಟ್ಟಿ ಸಾರಾಯಿ ಹಾಗೂ 10 ಲೀಟರ್ ಬೆಲ್ಲದ ಕೊಳೆ ವಶಪಡಿಸಿಕೊಂಡಿದ್ದಾರೆ. ಆರೋಪಿ ಜ್ಯೋತಿ ಈ ವೇಳೆ ಸ್ಥಳದಿಂದ ಪರಾರಿಯಾಗಿದ್ದಾರೆ.
ದಾಳಿಯ ವೇಳೆ ಅಬಕಾರಿ ಉಪ ನಿರೀಕ್ಷಕರಾದ ಮುಹಮ್ಮದ ಹುಸೇನ್, ಮುಖ್ಯಪೇದೆ ಮಂಜುನಾಥ್ ಸೇರಿದಂತೆ ಇತರರು ಜೊತೆಗಿದ್ದರು.