×
Ad

Raichur | 20 ಲಕ್ಷ ರೂ. ಮೌಲ್ಯದ 20 ಕೆಜಿ ಗಾಂಜಾ ಜಪ್ತಿ : ಇಬ್ಬರ ಬಂಧನ

Update: 2026-07-06 21:50 IST

ರಾಯಚೂರು : ಜಿಲ್ಲೆಯ ಬಳಗಾನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 20 ಲಕ್ಷ ರೂ. ಮೌಲ್ಯದ 20 ಕೆಜಿ ಗಾಂಜಾವನ್ನು ಜಪ್ತಿ ಮಾಡಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರನ್ನು ಸಿಂಧನೂರು ಮೂಲದ ದೀನಬಂಧು ಮಂಡಲ್ ಹಾಗೂ ಶಂಭು ಸರ್ದಾರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬೈಕ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದ ವಿಶೇಷ ತಂಡ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದುಕೊಂಡಿದೆ.

ಬಂಧಿತರಿಂದ ಸುಮಾರು 20 ಕೆಜಿ ಗಾಂಜಾ ಹಾಗೂ ಸಾಗಾಟಕ್ಕೆ ಬಳಸಿದ್ದ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪ್ರಕರಣ ಸಂಬಂಧ ಎನ್‌ಡಿಪಿಎಸ್ (NDPS) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಜಿಲ್ಲೆಯಲ್ಲಿನ ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ಬೇರುಸಹಿತ ಕಿತ್ತೊಗೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News