×
Ad

ರಾಯಚೂರು | ವಿಚಾರಣೆ ವೇಳೆ‌ ಪೊಲೀಸರಿಂದ ಹಲ್ಲೆ ಆರೋಪ ; ವ್ಯಕ್ತಿ ಮೃತ್ಯು

Update: 2025-04-01 21:48 IST

ರಾಯಚೂರು : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಾಖಲಾದ ದೂರಿನ ಮೇರೆಗೆ ಪೊಲೀಸರು ಠಾಣೆಗೆ ವಿಚಾರಣೆಗೆಂದು ಕರೆಸಿ, ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿಯೊರ್ವ ಮೃತಪಟ್ಟಿರುವ ಆರೋಪ ಕೇಳಿ ಬಂದಿದೆ.

ನಗರದ ಐಬಿ ರಸ್ತೆಯ ಈಶ್ವರ ನಗರ ನಿವಾಸಿ ವಿರೇಶ್ (27) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ಕೌಟುಂಬಿಕ ಕಲಹ ಕಾರಣಕ್ಕೆ ಪತ್ನಿ ಹಾಗು ಪತ್ನಿ ಮನೆಯವರ ದೂರಿನ ಮೇರೆಗೆ ಯುವಕನನ್ನು ಪಶ್ಚಿಮ ಠಾಣೆಯ ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದ ವೇಳೆ ಯುವಕ ವಿರೇಶನನ್ನು ಪೊಲೀಸರು ಥಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಪೊಲೀಸರ ಥಳಿತದಿಂದಲೇ ಯುವಕ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಪಿಎಸ್ ಐ ಮಂಜುನಾಥ್‌ ಹಾಗೂ ಪೊಲೀಸ್‌ ಸಿಬ್ಬಂದಿಯ ಮೇಲೆ ಕ್ರಮ ಕೈಗೊಂಡು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ರಾಯಚೂರಿನ ಎಸ್.ಪಿ ಕಚೇರಿ ಮುಂದೆ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಧರಣಿ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News