ರಾಯಚೂರು : ಇಂಡಿಯಾ ಮೈತ್ರಿಕೂಟದಿಂದ ಚುನಾವಣಾ ಆಯೋಗದ ವಿರುದ್ದ ಪ್ರತಿಭಟನೆ ಮಾಡುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯನ್ನು ಬಂಧಿಸಿದ ಕೇಂದ್ರ ಸರಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ನಾಯಕರು ನಗರದ ಗಂಜ್ ವೃತ್ತದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಗಂಜ್ ವೃತ್ತದವರೆಗೆ ಮೆರವಣಿಗೆ ನಡೆಸಿ ಜ್ಞಾನೇಶ್‌ ಕುಮಾರ್‌ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮೊಹಮ್ಮದ್ ಶಾಲಂ ಮಾತನಾಡಿ, ಪ್ರತಿಭಟನಾನಿರತ ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ಕಾಂಗ್ರಸ್ ನಾಯಕರನ್ನು ಬಂಧಿಸಿ ಅವರ ಪ್ರತಿಭಟಿಸುವ ಹಕ್ಕು ಕಸಿದುಕೊಂಡಿದ್ದು‌ ಖಂಡನೀಯ. ಪ್ರತಿಭಟನಾನಿರತರನ್ನು ಅಮಾನುಷವಾಗಿ ಎಳೆದಾಡಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಎಸ್ ಐಆರ್ ಪ್ರಕ್ರಿಯೆ ಕೈಬಿಟ್ಟು ಅವರ ವಿರುದ್ಧ ತನಿಖೆ ನಡೆಸಬೇಕು ಎಂದರು. ಎಂದರು.

ಪಾಲಿಕೆಯ ಹಿರಿಯ ಸದಸ್ಯ ಜಯಣ್ಣ ಮಾತನಾಡಿ, ವಿರೋಧ ಪಕ್ಷದ ಧ್ವನಿ ಹತ್ತಿಕ್ಕುವ ಕೆಲಸ ಕೇಂದ್ರ ಸರಕಾರ ಮಾಡುತ್ತಿದೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ಎಪಿಎಂಸಿ ಮಾಜಿ ಅಧ್ಯಕ್ಷ ಅಮರೇಗೌಡ ಹಂಚಿನಾಳ, ಮುಖಂಡರಾದ ವಿಶ್ವನಾಥ ಪಟ್ಟಿ, ಗಿರಿಯಪ್ಪ ನೆಲಹಾಳ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಿರ್ಮಲಾ‌ಬೆಣ್ಣೆ, ಶಶಿಕಲಾ ಭೀಮರಾಯ, ಮಲ್ಲೇಶ ಕೊಲುಮಿ, ಮರಿಸ್ವಾಮಿ, ರುದ್ರಪ್ಪ ಅಂಗಡಿ, ಜಿ.ಶಿವಮೂರ್ತಿ, ಗೋಂವಿದ ಮತ್ತಿತ್ತರರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor