ರಾಯಚೂರು : 2026-27ನೇ ಸಾಲಿಗೆ ಸಿರವಾರ ಉಪನೋಂದಣಿ ಕಚೇರಿಯ ವ್ಯಾಪ್ತಿಗೆ ಒಳಪಡುವ ನಗರ, ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳ ಸ್ಥಿರಾಸ್ತಿಗಳ ಮಾರ್ಗಸೂಚಿ ಬೆಲೆಯನ್ನು ಪರಿಷ್ಕರಿಸಲಾಗಿದೆ.

ಸಿರವಾರ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ನ. 6ರಂದು ನಡೆದ ತಾಲೂಕು ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ನಿರ್ಧಾರಣಾ ಉಪಸಮಿತಿ ಸಭೆಯಲ್ಲಿ ನೀಡಿದ ನಿರ್ದೇಶನದಂತೆ ಮಾರ್ಗಸೂಚಿ ಬೆಲೆಗಳನ್ನು ಪರಿಷ್ಕರಿಸಲಾಗಿದೆ. ಸಾರ್ವಜನಿಕರ ಮಾಹಿತಿಗಾಗಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅನುಕೂಲವಾಗುವಂತೆ ಪರಿಷ್ಕೃತ ಬೆಲೆಪಟ್ಟಿಯ ಕರಡು ಪ್ರತಿಯನ್ನು ಸಿರವಾರ ಉಪನೋಂದಣಿ ಕಚೇರಿಯಲ್ಲಿ ಪ್ರಕಟಿಸಲಾಗಿದೆ.

ಪರಿಷ್ಕೃತ ಮಾರ್ಗಸೂಚಿ ಬೆಲೆಗಳ ಕುರಿತು ಸಾರ್ವಜನಿಕರಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಕರಡು ಪ್ರತಿಯನ್ನು ಪ್ರಕಟಿಸಿದ ದಿನದಿಂದ 15 ದಿನಗಳ ಕಾಲಾವಕಾಶದೊಳಗೆ ಉಪನೋಂದಣಿ ಅಧಿಕಾರಿಗಳಿಗೆ ಲಿಖಿತವಾಗಿ ಸಲ್ಲಿಸಬಹುದಾಗಿದೆ ಎಂದು ಉಪನೋಂದಣಿ ಅಧಿಕಾರಿ ಹಾಗೂ ತಾಲೂಕು ಸ್ಥಿರಾಸ್ತಿಗಳ ಮೌಲ್ಯ ನಿರ್ಧಾರಣಾ ಉಪಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor