×
Ad

ರಾಯಚೂರು | ಕಾಲುವೆಯಲ್ಲಿ ಮಹಿಳೆಯ ಮೃತದೇಹ ಪತ್ತೆ

Update: 2024-11-13 22:14 IST

ಸಾಂದರ್ಭಿಕ ಚಿತ್ರ

ರಾಯಚೂರು: ಇಲ್ಲಿನ ಮಾನ್ವಿ ತಾಲ್ಲೂಕಿನ ನೀರಮಾನ್ವಿ ಕ್ರಾಸ್ ಹತ್ತಿರ ತುಂಗಭದ್ರಾ ಎಡದಂಡೆ ನಾಲೆಯ 89ನೇ ವಿತರಣಾ ಕಾಲುವೆಯಲ್ಲಿ ಮಹಿಳೆಯ ಮೃತದೇಹ ಬುಧವಾರ ಪತ್ತೆಯಾಗಿದೆ.

ಕಾಲುವೆಯ ಗ್ಯಾಂಗ್ ಮನ್ ಆಗಿ ಕೆಲಸ ಮಾಡುವವರು ಮೃತದೇಹವನ್ನು ಕಾಲುವೆಯಿಂದ ಹೊರ ತೆಗೆದಿದ್ದಾರೆ. ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು ಮಹಿಳೆಯ ಮೃತದೇಹ ಎಂದು ದೃಢಪಟ್ಟಿದೆ.

ವಿಷಯ ತಿಳಿದು ಪೊಲೀಸ್ ಇನ್‌ಸ್ಪೆಕ್ಟರ್‌ ವೀರಭದ್ರಯ್ಯ ಹಿರೇಮಠ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗ್ಯಾಂಗ್ ಮನ್ ರಮಜಾನ್ ಸಾಬ ನೀಡಿದ ದೂರಿನ ಅನ್ವಯ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News