Raichur | ಮಸ್ಕಿ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅಬ್ದುಲ್ ಅಝೀಝ್, ಪ್ರಧಾನ ಕಾರ್ಯದರ್ಶಿಯಾಗಿ ವಿಠಲ್ ಕೇಳೂತ್ ಆಯ್ಕೆ
ರಾಯಚೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಸ್ಕಿ ತಾಲೂಕು ಘಟಕಕ್ಕೆ ಮತ್ತೊಮ್ಮೆ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಅಬ್ದುಲ್ ಅಝೀಝ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ್ ಕೆಳೂತ್ ಅವಿರೋಧ ಆಯ್ಕೆಯಾಗಿದ್ದಾರೆ.
ಮಸ್ಕಿಯ ಪತ್ರಿಕಾ ಭವನದಲ್ಲಿ ಸೋಮವಾರ ಮಧ್ಯಾಹ್ನ ತಾಲೂಕು ಘಟಕಕ್ಕೆ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ಉಪಾಧ್ಯಕ್ಷರಾಗಿ ಬದರಿನಾಥ, ಖಜಾಂಚಿಯಾಗಿ ಅಮರೇಶ ಸಾಲಿಮಠ ಆಯ್ಕೆಯಾದರು. ಅವಿರೋಧ ಆಯ್ಕೆ ನಡೆದ ಬಳಿಕ ಜಿಲ್ಲಾಧ್ಯಕ್ಷರಾದ ಆರ್.ಗುರುನಾಥ ಫಲಿತಾಂಶ ಪ್ರಕಟಿಸಿ ವಿಜೇತರಿಗೆ ಪ್ರಮಾಣಪತ್ರ ವಿತರಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ಧಯ್ಯ ಸ್ವಾಮಿ ಕುಕನೂರು, ರಾಜ್ಯ ಸಮಿತಿ ಸದಸ್ಯ ಬಸವರಾಜ ನಾಗಡದಿನ್ನಿ, ಜಿಲ್ಲಾ ಉಪಾಧ್ಯಕ್ಷ ಮಹಾನಂದ ನಾಯಕ, ಜಿಲ್ಲಾ ಕಾರ್ಯದರ್ಶಿ ಬಸವರಾಜ ಬೋಗಾವತಿ, ಜಿಲ್ಲಾ ಖಜಾಂಚಿ ಮಲ್ಲಿಕಾರ್ಜುನಯ್ಯ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರಕಾಶ ಮಸ್ಕಿ, ಲಕ್ಷ್ಮಿ ಪ್ರಸನ್ನ ಜೈನ್ , ಲಕ್ಷ್ಮಣ ಕಪಗಲ್ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.