ರಾಯಚೂರು | ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ : ಆರೋಪಿಯ ಬಂಧನ
ಸಾಂದರ್ಭಿಕ ಚಿತ್ರ (Photo: PTI)
ರಾಯಚೂರು : ಜಿಲ್ಲೆಯ ಮಸ್ಕಿ ತಾಲೂಕಿನ ಗ್ರಾಮವೊಂದರಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದ್ದು, ಆರೋಪಿಯನ್ನು ಶಿವಮೂರ್ತಿ (25) ಎಂದು ಗುರುತಿಸಲಾಗಿದೆ.
ದೇಸಾಯಿ ಭೋಗಾಪೂರ ಗ್ರಾಮದ ನಿವಾಸಿಯಾಗಿರುವ ಶಿವಮೂರ್ತಿಯನ್ನು ಫೋಕ್ಸೋ ಪ್ರಕರಣ ದಾಖಲಿಸಿಕೊಂಡು ಮಸ್ಕಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿನಿಗೆ ನಿರಂತರವಾಗಿ ಅತ್ಯಾಚಾರ ಮಾಡಿದ್ದರಿಂದ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ಆರೋಪಿ ಗರ್ಭಪಾತಕ್ಕೆ ಒತ್ತಾಯಿಸಿ ಮಾತ್ರೆ ನೀಡಿದ್ದಾನೆ ಎನ್ನಲಾಗಿದೆ. ಅತಿ ಹೆಚ್ಚು ಮಾತ್ರೆ ಸೇವಿಸಿದರ ಪರಿಣಾಮ ಅಸ್ವಸ್ಥಳಾದ ವಿದ್ಯಾರ್ಥಿನಿಯನ್ನು ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಇದಕ್ಕೂ ಮುಂಚೆ ಅ.30ರಂದು ರಾತ್ರಿ 11 ಗಂಟೆಗೆ ಮನೆಯಿಂದ ಹೊರಗೆ ಮೂತ್ರ ವಿಸರ್ಜನೆಗೆ ಹೋಗುವುದಾಗಿ ಹೇಳಿದ ಬಾಲಕಿ ಮರಳಿ ಬಂದಿರಲಿಲ್ಲ, ಈ ಕುರಿತು ಬಾಲಕಿಯ ತಾಯಿ ಅ.31 ರಂದು ಮಸ್ಕಿ ಠಾಣೆಯಲ್ಲಿ ತನ್ನ ಮಗಳನ್ನು ಯಾರೋ ಅಪಹರಿಸಿಕೊಂಡು ಹೋಗಿದ್ದಾರೆ ಹುಡುಕಿಕೊಡಿ ಎಂದು ದೂರು ನೀಡಿದ್ದರು ಎಂದು ತಿಳಿದು ಬಂದಿದೆ.