×
Ad

ರಾಯಚೂರು| ಖಾಲಿ ಹುದ್ದೆಗಳ ಭರ್ತಿಗಾಗಿ ಎಐಡಿವೈಓದಿಂದ ಮನ್ಸಲಾಪುರದಲ್ಲಿ ಸಹಿ ಸಂಗ್ರಹ ಅಭಿಯಾನ

Update: 2025-12-04 14:10 IST

ರಾಯಚೂರು: ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್(ಎಐಡಿವೈಓ) ಗ್ರಾಮ ಘಟಕದ ವತಿಯಿಂದ ಇಂದು ಮನ್ಸಲಾಪುರ ಗ್ರಾಮದಲ್ಲಿ ಖಾಲಿ ಹುದ್ದೆ ಭರ್ತಿಗಾಗಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.

ಕೇಂದ್ರ ಸರ್ಕಾರದ 78 ಇಲಾಖೆಗಳಲ್ಲಿ ಖಾಲಿ ಇರುವ 9.79 ಲಕ್ಷ ಹುದ್ದೆಗಳನ್ನು ಹಾಗೂ ರಾಜ್ಯದ 43 ಇಲಾಖೆಗಳಲ್ಲಿನ 2.85 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕು. ಎಲ್ಲಾ ನೇಮಕಾತಿಗಳ ವಯೋಮಿತಿಯನ್ನು ಕನಿಷ್ಠ ಐದು ವರ್ಷ ಹೆಚ್ಚಿಸಬೇಕು. ಎಲ್ಲಾ ನೇಮಕಾತಿ ಪ್ರಕ್ರಿಯೆಗಳನ್ನು ಸಂಪೂರ್ಣವಾಗಿ ಪಾರದರ್ಶಕವಾಗಿ ನಡೆಸಬೇಕು. ಎಲ್ಲಾ ರೀತಿಯ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಬೇಕು ಎಂದು ಸಂಘಟಕರು ಆಗ್ರಹಿಸಿದರು.

ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಇನ್ನು ಮುಂತಾದ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಈ ಸಹಿಸಂಗ್ರಹ ಅಭಿಯಾನವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್, ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸಿದ ವಿವಿಧ ಪಕ್ಷಗಳ ಸರ್ಕಾರಗಳು ಯುವಜನರನ್ನು ವೋಟ್ ಬ್ಯಾಂಕ್ ಆಗಿ ಮಾಡಿಕೊಂಡಿವೆ. ಅವರ ಬಗ್ಗೆ ಯಾವುದೇ ಕಾಳಜಿಯನ್ನು ವಹಿಸುತ್ತಿಲ್ಲ. ಉದ್ಯೋಗಗಳನ್ನು ಕೊಡುತ್ತಿಲ್ಲ. ಬದಲಿಗೆ ಇತ್ತೀಚಿಗೆ ಧಾರವಾಡದಲ್ಲಿ ಉದ್ಯೋಗ ಕೊಡಿ ಎಂದು ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ಉದ್ಯೋಗ ಆಕಾಂಕ್ಷಿಗಳ ಮೇಲೆ ಲಾಠಿ ಪ್ರಹಾರ ನಡೆಸಲಾಗಿದೆ. ಇದು ಅತ್ಯಂತ ಖಂಡನೀಯ ಕ್ರಮವಾಗಿದೆ. ಪರಿಸ್ಥಿತಿ ಹೀಗೇಯೇ ಮುಂದುವರೆದರೆ ಯುವಜನರು ಇನ್ನಷ್ಟು ಬಲಿಷ್ಠವಾದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಘಟಕದ ಅಧ್ಯಕ್ಷರಾದ ಕೃಷ್ಣ ನಾಯಕ್ ಮನಸ್ಲಾಪುರ್, ಗ್ರಾಮ ಘಟಕದ ಕಾರ್ಯದರ್ಶಿ ಸಂತೋಷ ಸಾಗರ್, ಹಿರಿಯರಾದ ಶೇಖರಪ್ಪ, ವೆಂಕಟೇಶ್ ನಾಯಕ್, ಸಣ್ಣ ತಿಮ್ಮಣ್ಣ , ಶಿವರಾಜ್ ನಾಯಕ್, ಮಂಜುನಾಥ್ ಹಿರೇಮಠ್ ಅವರು ಸಹಿ ಮಾಡಿ ಬೆಂಬಲಿಸಿದರು.

ಗ್ರಾಮದ ಯುವಕರಾದ ಹುಸೇನ್ ಬಾಷಾ, ಪೃಥ್ವಿರಾಜ, ಮಹೇಶ, ಚೆನ್ನಪ್ಪ, ಮಲ್ಲೇಶ ಮಡಿವಾಳ, ನಾಗೇಂದ್ರ ಮುಂತಾದವರು ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿದ್ದರು. ಗ್ರಾಮದ ನೂರಾರು ಜನರು ಈ ಸಹಿ ಸಂಗ್ರಹ ಅಭಿಯಾನದಲ್ಲಿ ಸಹಿ ನೀಡುವ ಮೂಲಕ ಬೆಂಬಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News