ರಾಯಚೂರು | ಅಂಬಾದೇವಿ ಜಾತ್ರೆ ; ಜ.12ರಿಂದ 17ರವರೆಗೆ ಮದ್ಯ ಮಾರಾಟ ನಿಷೇಧ : ಜಿಲ್ಲಾಧಿಕಾರಿ ನಿತೀಶ್ ಕೆ.
ರಾಯಚೂರು : ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸೋಮಲಾಪುರ ಗ್ರಾಮದ ಶ್ರೀ ಅಂಬಾದೇವಿ ದೇವಸ್ಥಾನದ ಜಾತ್ರೆಯ ಅಂಗವಾಗಿ ಜಾತ್ರಾ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಜ.12ರಿಂದ ಜ.17ರ ಬೆಳಗ್ಗೆ06ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ತಿಳಿಸಿದ್ದಾರೆ.
ಜಾತ್ರಾ ಅವಧಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮತ್ತು ಹೊರ ರಾಜ್ಯದಿಂದ ಭಕ್ತಾದಿಗಳು ಬರುತ್ತಾರೆ. ಜಾತ್ರೆಯು ಸುವ್ಯವಸ್ಥೆಯಾಗಿ ನಡೆಯಲು ಜಾತ್ರಾ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಜಾತ್ರೆ ನಡೆಯುವ ಸ್ಥಳದಿಂದ ಸುಮಾರು 10ಕಿ.ಮೀ ವ್ಯಾಪ್ತಿಯವರಗೆ ಜನವರಿ12 ರಿಂದ ಬೆಳಗ್ಗೆ 06ಗಂಟೆಯಿಂದ 17ರವರೆಗೆ ಎಲ್ಲಾ ರೀತಿಯ ಮಧ್ಯ ತಯಾರಿಕಾ ಘಟಕಗಳು, ಸಾಗಾಣಿಕೆ ಮತ್ತು ಸಂಗ್ರಹಣೆಯನ್ನು ಅಥವಾ ಮಾರಾಟ ಮಳಿಗೆಗಳನ್ನು ಬಂದ್ ಮಾಡಲು ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಹೊರಗಿನಿಂದ ಮದ್ಯ ಇತ್ಯಾದಿಗಳನ್ನು ತಂದು ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.