×
Ad

ರಾಯಚೂರು | ಹೃದಯಾಘಾತದಿಂದ ಕರ್ತವ್ಯ ನಿರತ ಪೌರ ಕಾರ್ಮಿಕ ಮೃತ್ಯು

Update: 2024-11-09 17:27 IST

ರಾಯಚೂರು : ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತ್ ಪೌರ ಕಾರ್ಮಿಕ ತಿಮ್ಮಪ್ಪ ಅಸ್ಕಿಹಾಳ (36) ಶನಿವಾರ ಬೆಳಿಗ್ಗೆ ಕರ್ತವ್ಯದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೆಳಗಿನ ಜಾವ ಕೆಲಸ ಮಾಡುವಾಗ ಹೃದಯಾಘಾತದಿಂದ ಕುಸಿದು ಬಿದ್ದರು, ಬಳಿಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತರು ಪತ್ನಿ, ನಾಲ್ಕು ಮಕ್ಕಳನ್ನು ಅಗಲಿದ್ದಾರೆ.

ಘಟನೆ ಬಳಿಕ ತಹಶಿಲ್ದಾರ್ ರವಿ ಎಸ್.ಅಂಗಡಿ, ಪಟ್ಟಣ ಪಂಚಾಯತ್ ಅಧ್ಯಕ್ಷ ಭೂಪನಗೌಡ, ಉಪಾಧ್ಯಕ್ಷೆ ಲಕ್ಷ್ಮೀ, ಅದೆಪ್ಪ ಗೌಡ ಸಂತಾಪ ಸೂಚಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News