×
Ad

ರಾಯಚೂರು | ನೌಕರರ ವಾರ್ಷಿಕ ಕ್ರೀಡಾಕೂಟ

Update: 2025-02-17 17:57 IST

ರಾಯಚೂರು : ವ್ಯಕ್ತಿಯು ದೈನಂದಿನವಾಗಿ ಕ್ರಿಯಾಶೀಲತೆ ಹಾಗೂ ಉತ್ಸಾಹದಿಂದ ಕಾರ್ಯನಿರ್ವಹಿಸಲು, ದೈಹಿಕ ಹಾಗೂ ಮಾನಸಿಕ ಸದೃಢತೆ ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ್ ವತಿಯಿಂದ ಫೆ.17ರ ಸೋಮವಾರ ದಂದು ನಗರದ ಕೃಷಿ ವಿವಿಯ ಕ್ರೀಡಾಂಗಣದಲ್ಲಿ ನಡೆದ 2024-25ನೇ ಸಾಲಿನ ನೌಕರರ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಾರ್ವಜನಿಕ ಸೇವೆಯಲ್ಲಿರುವವರು ಸಂಯಮದಿಂದ ಹಾಗೂ ಹೆಚ್ಚು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಣೆ ಮಾಡಲು ಮಾನಸಿಕ ಆರೋಗ್ಯವು ಪ್ರಮುಖವಾಗಿದೆ. ಮಾನಸಿಕ ಆರೋಗ್ಯ ಕಾಯ್ದುಕೊಳ್ಳಲು ದಿನನಿತ್ಯದ ಜೀವನ ಶೈಲಿಯಲ್ಲಿ ದೈಹಿಕ ಚಟುವಟಿಕೆಗಳಿಗೂ ಒತ್ತು ಕೊಡಬೇಕು ಎಂದರು.

8 ತಂಡ, 600 ಅಧಿಕಾರಿಗಳು ಭಾಗಿ :

ಎರಡು ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಕಬ್ಬಡ್ಡಿ, ಖೋಖೋ, ವಾಲಿಬಾಲ್, ಚೆಸ್, ಬ್ಯಾಡ್ಮಿಂಟನ್, ಲಾಂಗ್ ಜಂಪ್, ಶಾಟಪುಟ್, ಡಿಸ್ಕಸ್ ಥೋ, ಜಾವಲಿನ್ ಥೋ, ರನ್ನಿಂಗ್ ಸೇರಿದಂತೆ ವಿವಿಧ ಸ್ಪರ್ಧೆಗಳು ನಗರದ ಕೃಷಿ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಜಿಲ್ಲೆಯ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಇಲಾಖೆ ಒಳಗೊಂಡ 8 ತಂಡಗಳ ಸುಮಾರು 600 ಅಧಿಕಾರಿ-ನೌಕರರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಶಶಿಕಾಂತ್ ಶಿವಪುರೆ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಶರಣಬಸವರಾಜ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ವಿಜಯಶಂಕರ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೃಷ್ಣ ಶಾವಂತಗೇರಿ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿರೇಶ್ ನಾಯಕ ಸೇರಿದಂತೆ ಇತರರು ಇದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News