×
Ad

ರಾಯಚೂರು | ತಜ್ಞ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

Update: 2025-01-29 17:55 IST

ರಾಯಚೂರು : ಜಿಲ್ಲೆಯ ಅಧೀನದಲ್ಲಿ ಬರುವ ತಾಲೂಕು ಸಾರ್ವಜನಿಕ ಆಸ್ಪತ್ರೆಗಳು, ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವಿವಿಧ ವೃಂದದ ತಜ್ಞ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ, ಮೇರಿಟ್ ಕಮ್ ರೋಷ್ಟರ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಕಾರ್ಯಕ್ರಮದಡಿ ಸೃಜಿಸಿರುವ ಹುದ್ದೆಗಳಿಗೆ ಫೆ.4ರ ಬೆಳಿಗ್ಗೆ 10.30ರಿಂದ 5.30ಗಂಟೆವರೆಗೆ ಪೂರ್ಣ ಸಮಯ, ಅರೆಕಾಲಿಕ ಅಥವಾ ಕರೆ ಆಧಾರದ ಮೇಲೆ ನೇರ ಸಂದರ್ಶನವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಸಭಾಂಗಣ ರಾಯಚೂರಿನಲ್ಲಿ ಹಮ್ಮಿಕೊಂಡಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ತಜ್ಞ ಹುದ್ದೆಗಳ ತಾಲೂಕುವಾರು ಮಾಹಿತಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ಡಿ.ಹೆಚ್.ಓ ಕಚೇರಿಯನ್ನು ಕೆಲಸದ ಅವಧಿಯಲ್ಲಿ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News