Raichur | ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
Update: 2026-07-16 17:24 IST
ರಾಯಚೂರು : ರಾಯಚೂರಿನ ಯರಮರಸ್ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ವಿವಿಧ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಸತಿ ಶಾಲೆಯಲ್ಲಿ ಭೌತಶಾಸ್ತ್ರ ವಿಷಯದಲ್ಲಿ 1ಹುದ್ದೆಗೆ ಎಮ್.ಎಸ್ಸಿ.ಬಿಇಡಿ ಹಾಗೂ ವಿಜ್ಞಾನ ವಿಷಯದಲ್ಲಿ 1ಹುದ್ದೆಗೆ ಬಿ.ಎಸ್ಸಿ.ಬಿಇಡಿ ವಿದ್ಯಾರ್ಹತೆ ಹೊಂದಿರುವವರು ಅಗತ್ಯ ದಾಖಲಾತಿಗಳೊಂದಿಗೆ ಜು.25ರೊಳಗಾಗಿ ಯರಮರಸ್ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 79759443982 ಅಥವಾ 9035888432ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ