ರಾಯಚೂರು | ಪಾಲಿಟೆಕ್ನಿಕ್ ಕಾಲೇಜ್‌ನ ಪ್ರಥಮ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
ರಾಯಚೂರು : ಇಲ್ಲಿನ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಿಂದ 2025-26ನೇ ಸಾಲಿನ ಸರ್ಕಾರಿ/ ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ಡಿಪ್ಲೋಮಾ ಪ್ರವೇಶಾತಿಯನ್ನು ಆನ್‌ಲೈನ್ ಆಪ್ಷನ್ ಎಂಟ್ರಿ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ : https://dtetech.karnataka.gov.in/kartechnical, https:// dtek.karnataka.gov.in ಅಥವಾ www.cetonline.karnataka.gov.in/kea/ ನಲ್ಲಿ ಇರುವ ಮಾಹಿತಿ ಪುಸ್ತಕ ಹಾಗೂ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅದರ ಸೂಚನೆಯನ್ವಯ ಅಭ್ಯರ್ಥಿಗಳು ಸರ್ಕಾರಿ ಪಾಲಿಟೆಕ್ನಿಕ್ ರಾಯಚೂರಿನಲ್ಲಿ ಉಪನ್ಯಾಸಕರು ಅಥವಾ ಸಿಬ್ಬಂದಿಗಳ ಸಹಾಯದೊಂದಿಗೆ ಆನ್‌ಲೈನ್ ಮೂಲಕ ಅರ್ಜಿ ಹಾಗೂ ತಮ್ಮ ಇಚ್ಛೆಗನುಗುಣವಾಗಿ ಕೋರ್ಸ್ ಅಥವಾ ಕಾಲೇಜು ಆಯ್ಕೆ ಮಾಡಿ ಆಪ್ಷನ್ ಎಂಟ್ರಿಗೆ ಮೇ 15ರ ಸಂಜೆ 5.30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಯನ್ನು ಮತ್ತು ಆಪ್ಷನ್ ಎಂಟ್ರಿ ದಾಖಲಿಸಿದ ಮುದ್ರಿತ ಪ್ರತಿಗಳನ್ನು ಕಡ್ಡಾಯ ಪಡೆಯತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಇ-ಮಾಹಿತಿ ಪುಸ್ತಕದಲ್ಲಿನ ಅಂಶಗಳನ್ನು ಓದಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಕಚೇರಿಯ ಸಮಯದಲ್ಲಿ ಸಂಸ್ಥೆಯ ಪ್ರಾಂಶುಪಾಲರನ್ನು ಸಂಪರ್ಕಿಸುವಂತೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.