×
Ad

ರಾಯಚೂರು | ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಮಾನ ಸರಪಳಿ ನಿರ್ಮಿಸಿ ಪ್ರತಿಭಟನೆ

Update: 2025-08-14 17:15 IST

ರಾಯಚೂರು: ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ರೂ. ಗೌರವಧನ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ ಹಾಗೂ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.

ಬಳಿಕ ಪಾಲಿಕೆಯ ಆಯುಕ್ತರ ಕಚೇರಿ ಮುಂದೆ ಧರಣಿ ನಡೆಸಿ, ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಆಶಾ ಕಾರ್ಯಕರ್ತೆಯರು ಕಳೆದ ಎರಡು ಮೂರು ದಿನಗಳಿಂದ ರಾಯಚೂರಿನ‌ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಇಂದು ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು.

ಪ್ರತಿಭಟನಾನಿರತ ಎನ್.ಎಸ್.ವೀರೇಶ ಮಾತನಾಡಿ, ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು. ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು, ನಗರ ಪ್ರದೇಶದಲ್ಲಿನ ಆಶಾಗಳಿಗೆ 2,000 ರೂ. ಗೌರವಧನ ಹೆಚ್ಚಿಸಬೇಕು, 2025 ಜೂನ್-ಜುಲೈನಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು

ಆಶಾ ಕಾರ್ಯಕರ್ತೆಯರಾದ ಪ್ರಭಾವತಿ, ಮಲ್ಲಮ್ಮ, ಲಕ್ಷ್ಮೀ, ಇಂದಿರಾ ಸುಂದರಮ್ಮ, ಖಾದರ್ ಬಿ, ಶ್ರೀದೇವಿ ಮಹೇಶ್ ಚೀಕಲಪರ್ವಿ ಮತ್ತಿತರರು ಇದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News