×
Ad

ರಾಯಚೂರು: ಭಂಗಿ ಜನಾಂಗಕ್ಕೆ ರಾಜಕೀಯ ಸ್ಥಾನ ನೀಡಲು ಭಾಸ್ಕರ ಬಾಬು ಒತ್ತಾಯ

Update: 2025-12-03 11:41 IST

ರಾಯಚೂರು: ಕೇಂದ್ರದಲ್ಲಿ ಭಂಗಿ ಜನಾಂಗಕ್ಕೆ ಸೇರಿದವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಿಸಬೇಕೆಂದು ಅಖಿಲ ಭಾರತೀಯ ಮಜ್ದೂರ್ ಕಾಂಗ್ರೆಸ್‍ನ ರಾಷ್ಟ್ರೀಯ ಕಾರ್ಯದರ್ಶಿ ಭಾಸ್ಕರ ಬಾಬು ಅವರು ಸಂಸದರು ಮತ್ತು ಶಾಸಕರನ್ನು ಒತ್ತಾಯಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಭಂಗಿ ಜನಾಂಗಕ್ಕೆ ಸೇರಿದವರನ್ನು ಪರಿಶಿಷ್ಟ ಜಾತಿಗೆ ಸಂಬಂಧಿಸಿದ ವಿಧಾನ ಪರಿಷತ್ ಸದಸ್ಯರ ಸ್ಥಾನವನ್ನು ನೀಡಿ ನಾಮನಿರ್ದೇಶನ ಮಾಡಬೇಕು. ರಾಜ್ಯದ ಎಲ್ಲಾ ನಗರಸಭೆ ಮತ್ತು ಮಹಾನಗರ ಪಾಲಿಕೆಗಳಲ್ಲಿ ಮ್ಯಾನುವಲ್ ಸ್ಕ್ಯಾವೆಂಜರ್ ಅವಲಂಬಿತ ಒಬ್ಬರಿಗೆ ನಾಮ ನಿರ್ದೇಶನ ಸದಸ್ಯರಾಗಿ ನೇಮಕ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News