Raichur | ಭೂಮಾನಂದ ಕೊಲೆ ಖಂಡಿಸಿ ಭೀಮ್ ಆರ್ಮಿ ಪ್ರತಿಭಟನೆ

Update: 2026-08-11 21:04 IST

ರಾಯಚೂರು: ಭೀಮ್ ಆರ್ಮಿ ಭಾರತ ಏಕ್ತಾ ಮಿಷನ್ ಜಿಲ್ಲಾ ಘಟಕದ ವತಿಯಿಂದ ಭೂಮಾನಂದ ಕೊಲೆ ಪ್ರಕರಣವನ್ನು ಖಂಡಿಸಿ ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.

ಈ ವೇಳೆ ಭೀಮ್ ಆರ್ಮಿ ಭಾರತ ಏಕ್ತಾ ಮಿಷನ್ ರಾಜ್ಯಾಧ್ಯಕ್ಷ ರಘು ಸಿ. ಮಾತನಾಡಿ, ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಗ್ರಾಮದಲ್ಲಿ ಹದ್ದಿನಾಳ ಗ್ರಾಮದ ದಲಿತ ಯುವಕ ಭೂಮಾನಂದನ ಮೇಲೆ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದರು.

ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಾನೂನುಬದ್ಧವಾಗಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News