×
Ad

ರಾಯಚೂರು: ವಕ್ಫ್ ನೋಟಿಸ್ ವಾಪಸ್ ಪಡೆಯಲು ಆಗ್ರಹಿಸಿ ಬಿಜೆಪಿ ಧರಣಿ

Update: 2024-11-04 12:56 IST

ರಾಯಚೂರು: ರಾಜ್ಯದ ಹಲವೆಡೆ ರೈತರಿಗೆ ವಕ್ಫ್ ಮಂಡಳಿಯಿಂದ ನೋಟಿಸ್ ನೀಡಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಸೋಮವಾರ ಧರಣಿ ನಡೆಯಿತು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಧರಣಿ ನಡೆಸಿದ ಪಕ್ಷದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೇರಿ ರಾಜ್ಯ ಸರ್ಕಾರ ಹಾಗೂ ಸಚಿವ ಝಮೀರ್ ಅಹ್ಮದ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ವಕ್ಫ್ ಬೋರ್ಡ್ ಬೋರ್ಡ್ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳಲು ಹುನ್ನಾರ ನಡೆಸಿದೆ. ರಾಜ್ಯ ಸರ್ಕಾರ ವಕ್ಫ್ ಬೋರ್ಡ್ ಪರವಾಗಿ ಮೃದು ಧೋರಣೆ ಅನುಸರಿಸುತ್ತಿದೆ. ವಕ್ಫ್ ಹೆಸರಿನಲ್ಲಿ ತುಷ್ಟೀಕರಣ ನೀತಿ ಅನುಸರಿಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು. ಕೂಡಲೇ ರೈತರಿಗೆ ನೀಡಿರುವ ನೋಟೀಸ್ ವಾಪಸ್ ಪಡೆದು ರೈತರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದರು.

ಧರಣಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎನ್ ಶಂಕ್ರಪ್ಪ, ಶಂಕರ ರೆಡ್ಡಿ, ಚಂದ್ರಶೇಖರ, ಕಡಗೋಲ ರಾಮು, ಶರಣಮ್ಮ, ಸುಮಾ ಅಶೋಕ ಗಸ್ತಿ, ಡಾ.ನಾಗರಾಜ ಬಾಲ್ಕಿ ಮತ್ತಿತರರು ಪಾಲ್ಗೊಂಡಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News