×
Ad

Raichur | ಜೀವರಕ್ಷೆಗೆ ರಕ್ತದಾನ ಅತ್ಯಂತ ಮಹತ್ವದ್ದು: ಎಸ್‌ಪಿ ಅರುಣಾಂಗ್ಷು ಗಿರಿ

ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾಗೆ ಚಾಲನೆ

Update: 2026-06-16 21:49 IST

ರಾಯಚೂರು: ಅಪಘಾತಗಳು ಹಾಗೂ ಗಂಭೀರ ಕಾಯಿಲೆಗಳ ಸಂದರ್ಭದಲ್ಲಿ ಪ್ರಾಣಾಪಾಯದಲ್ಲಿರುವವರ ಜೀವ ಉಳಿಸಲು ರಕ್ತದಾನ ಮಹತ್ತರ ಪಾತ್ರ ವಹಿಸುತ್ತದೆ. ಆದ್ದರಿಂದ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆವರಣದಲ್ಲಿ ಮಂಗಳವಾರ ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆ ಮತ್ತು ನಿಯಂತ್ರಣ ಘಟಕ, ಲಯನ್ಸ್ ಕ್ಲಬ್, ರೆಡ್ ಕ್ರಾಸ್ ಸಂಸ್ಥೆ, ರೆಡ್ ರಿಬ್ಬನ್ ಕ್ಲಬ್, ಎನ್‌ಎಸ್‌ಎಸ್, ಎನ್‌ಸಿಸಿ ಹಾಗೂ ಜಿಲ್ಲೆಯ ವಿವಿಧ ರಕ್ತ ಕೇಂದ್ರಗಳು ಮತ್ತು ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ರಕ್ತದಾನದ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಇನ್ನೂ ಸಾಕಷ್ಟು ಮಾಹಿತಿ ಕೊರತೆ ಇದೆ. ರಕ್ತದಾನದಿಂದಾಗುವ ಪ್ರಯೋಜನಗಳ ಕುರಿತು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಸಮಾಜಮುಖಿ ಕಾರ್ಯವಾದ ರಕ್ತದಾನದಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕಿದೆ ಎಂದು ಅವರು ಹೇಳಿದರು.

ರಕ್ತದಾನವು ಮಾನವೀಯ ಸೇವೆಯಾಗಿದ್ದು, ಅಗತ್ಯವಿರುವ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ರಕ್ತ ದೊರೆಯುವಂತೆ ಮಾಡಲು ಪ್ರತಿಯೊಬ್ಬರೂ ನಿಯಮಿತವಾಗಿ ರಕ್ತದಾನ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರ್‌ಸಿಹೆಚ್‌ಓ ಡಾ.ನಂದಿತಾ ಎಮ್‌ಎನ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಮಹಮ್ಮದ್ ಶಾಕೀರ್ ಮೊಹಿಯುದ್ದೀನ್, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಗಣೇಶ್, ರಿಮ್ಸ್ ಭೋದಕ ಆಸ್ಪತ್ರೆ ಪ್ರಾಂಶುಪಾಲ ಡಾ.ರಾಹುಲ್ ಕೀರ್ತಿ, ನವೋದಯ ಕಾಲೇಜಿನ ಪ್ರಾಂಶುಪಾಲ ಡಾ.ಗುರುದತ್ತ ಪವಾರ್, ಎಎಮ್‌ಇ ಕಾಲೇಜಿನ ದಂತ ವಿಭಾಗದ ಮುಖ್ಯಸ್ಥರಾದ ಡಾ.ಸೋಮನಾಥ ರೆಡ್ಡಿ, ಡಾ.ಅರುಣಾ ಕುಮಾರಿ, ಎಪ್‌ಡಬ್ಲ್ಯುಓ ಡಾ.ಶಿವಕುಮಾರ್ ನಾರಾ, ಡಾ.ಜಹೀರ್, ಮಹಿಳಾ ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಡಾ.ಸಂತೋಷ್, ಡಿಹೆಚ್‌ಇಓ ಈಶ್ವರ ಹೆಚ್ ದಾಸಪ್ಪನವರ, ಡಿವೈಹೆಚ್‌ಇಓ ಬಸಯ್ಯ, ಡ್ಯಾಪ್ಕೋ ಮೆಲ್ವಿಚಾರಕರು ಮಲ್ಲಯ್ಯ ಮಠಪತಿ, ಸಿಪಿಓ ಬಸವರಾಜಪ್ಪಗೌಡ ಸೇರಿದಂತೆ ಇಲಾಖೆಯ ಸಿಬ್ಬಂದಿಯವರು, ವೈದ್ಯಕೀಯ ವಿಧ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಜಾಥಾವು ವಿವಿಧ ಘೋಷಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ಜರುಗಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News