ರಾಯಚೂರು | ಡಿವೈಡರ್ ಗೆ ಢಿಕ್ಕಿ ಹೊಡೆದು ಕಾರು ಪಲ್ಟಿ : ಓರ್ವ ಮೃತ್ಯು
Update: 2025-10-07 17:13 IST
ರಾಯಚೂರು: ಕಾರೊಂದು ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ರಸ್ತೆ ಬದಿಯಲ್ಲಿರುವ ಗದ್ದೆಗೆ ಉರುಳಿ ಬಿದ್ದು, ಓರ್ವ ಮೃತಪಟ್ಟಿರುವ ಘಟನೆ ರಾಯಚೂರು ತಾಲ್ಲೂಕಿನ ಹುಣಸಿಹಾಳಹುಡಾ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಕಾರಿನಲ್ಲಿದ್ದವರು ಅಸ್ಕಿಹಾಳ ಗ್ರಾಮದವರು ಎಂದು ತಿಳಿದು ಬಂದಿದ್ದು, ಕಾರಿನಲ್ಲಿ ಅಸ್ಕಿಹಾಳದಿಂದ ಕಲ್ಲೂರಿಗೆ ಹೋಗುತ್ತಿದ್ದರು ಎನ್ನಲಾಗಿದೆ.
ಕಾರಿನಲ್ಲಿದ್ದ ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಗ್ರಾಮೀಣ ಠಾಣೆ ಪಿಎಸ್ಐ ಪ್ರಕಾಶ ಡಂಬಳ ತಿಳಿಸಿದ್ದಾರೆ.
ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.