ರಾಯಚೂರು | ಶಾಂತಿ–ಸೌಹಾರ್ದತೆಯಿಂದ ಮೀಲಾದುನ್ನಬಿ ಹಬ್ಬ ಆಚರಿಸಿ : ಎಂ.ಪುಟ್ಟಮಾಯ್ಯ
ರಾಯಚೂರು: ಶಾಂತಿ ಸೌಹಾರ್ದತೆಯಿಂದ ಮೀಲಾದುನ್ನಬಿ ಹಬ್ಬ ಆಚರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾಯ್ಯ ತಿಳಿಸಿದರು.
ಸ್ಥಳೀಯ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಮೀಲಾದುನ್ನಬಿ ಹಬ್ಬದ ಪ್ರಯುಕ್ತ ಬುಧವಾರ ಸಂಜೆ ಹಮ್ಮಿಕೊಂಡಿದ್ದ ಮುಸ್ಲಿಂ ಮುಖಂಡರೊಂದಿಗೆ ಶಾಂತಿಪಾಲನ ಸಭೆಯಲ್ಲಿ ಮಾತನಾಡಿದ ಅವರು, ಹಬ್ಬವನ್ನು ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯದಿಂದ ಸುಸೂತ್ರವಾಗಿ ಆಚರಿಸಬೇಕು ಎಂದು ಒತ್ತಾಯಿಸಿದರು.
ಕಾನೂನಿನ ಚೌಕಟ್ಟಿನೊಳಗೆ ಕಾರ್ಯಕ್ರಮಗಳನ್ನು ನಡೆಸುವಂತೆ ಸೂಚಿಸಿ, ಎಲ್ಲಾ ಮುಖಂಡರಿಗೆ ಸೂಕ್ತ ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ಹಲವಾರು ಮುಸ್ಲಿಂ ಮುಖಂಡರು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಗಣೇಶೋತ್ಸವದ 7 ನೇ ದಿನದ ಗಣೇಶ ವಿಸರ್ಜನೆ ಮೆರವಣಿಗೆ ಹಿನ್ನೆಲೆ ಎಸ್ಪಿ ಎಂ.ಪುಟ್ಟಮಾದಯ್ಯ ಅವರು ರಾಯಚೂರಿನ ಪ್ರಮುಖ ಬೀದಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮಂಗಳವಾರ ರಾತ್ರಿ ಮಾರ್ಗದರ್ಶನ ನೀಡಿದರು.
ವಿಶೇಷವಾಗಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ವಿಸರ್ಜನೆ ಮೆರವಣಿಗೆ ವೇಳೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು. ಅಲ್ಲದೇ, ರಾತ್ರಿಗಸ್ತು ವೇಳೆ ನಿಯೋಜಿತ ಬೀಟ್‌ಗಳನ್ನು ತಪಾಸಣೆ ಮಾಡಿ ಸರಿಯಾದ ರೀತಿಯಲ್ಲಿ ಕರ್ತವ್ಯ ಪಾಲನೆ ಮಾಡುವಂತೆ ಎಸ್ಪಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.