×
Ad

ರಾಯಚೂರು | ವಿಶ್ವ ಸುರಕ್ಷಿತ ಅಂತರ್ಜಾಲ ದಿನ ಆಚರಣೆ

Update: 2025-02-12 18:00 IST

ರಾಯಚೂರು : ಜಗತ್ತು ಇಂಟರ್ನೆಟ್ ಎಂಬ ಜಾಲದಲ್ಲಿ ಮುಳುಗಿದ್ದು, ಪ್ರಸ್ತುತ ವಿವಿಧ ರೀತಿಯಲ್ಲಿ ವಂಚಿಸುವ ಈ ಜಾಲತಾಣವು ಸಮಾಜವನ್ನು ಕಾಡುತ್ತಿದೆ. ಆದ್ದರಿಂದ ಇಂಟರ್ನೆಟ್ ಬಳಕೆದಾರರು ಎಚ್ಚರಿಕೆಯಿಂದ ಇರಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಹೇಳಿದರು.

ಫೆ.11ರ ಮಂಗಳವಾರ ದಂದು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ʼವಿಶ್ವ ಸುರಕ್ಷಿತ ಅಂತರ್ಜಾಲ ದಿನʼ ಆಚರಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮೊಬೈಲ್ನಲ್ಲಿ ಹಲವು ಆನ್ಲೈನ್ ವ್ಯವಹಾರವನ್ನು ಮಾಡುತ್ತಿದ್ದೇವೆ. ಇದನ್ನೇ ಬಂಡವಾಳವನ್ನಾಗಿಸಿಕೊಂಡು ಹಲವು ವಂಚಕರು ದುರುಪಯೋಗಪಡಿಸಿಕೊಳ್ಳುವ ಕಾರ್ಯ ಮಾಡುತ್ತಿದ್ದಾರೆ. ಹಾಗಾಗಿ ಒಟಿಪಿ ಇನ್ನಿತರ ಕೋಡ್ಗಳನ್ನು ಅನ್ಯರಿಗೆ ನೀಡದೆ ಅವಶ್ಯಕತೆಗೆ ತಕ್ಕಂತೆ ಬಳಸಿಕೊಳ್ಳಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರ ಹಾಗೂ ಪೊಲೀಸ್ ಇಲಾಖೆಯ ಸೈಬರ್ ಘಟಕದ ನಿರ್ದೇಶಕ ರವಿಶೇಖರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರ ಬಾಬು, ಆಯುಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಎಸ್.ಪಾಟೀಲ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಕೃಷ್ಣ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ.ಮಹ್ಮದ್ ಶಾಕೀರ ಮೊಹಿಯುದ್ದೀನ್, ಸೈಬರ್ ಘಟಕದ ಪೊಲೀಸ್ ಇನ್ಸ್ಪೆಕ್ಟರ್ ರಾಜಕುಮಾರ ಸೇರಿದಂತೆ ಇತರರು ಇದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News