×
Ad

ರಾಯಚೂರು | ಜಿಲ್ಲಾಧಿಕಾರಿ ಕಚೇರಿಯಲ್ಲಿ “ಭಾರತದ ಸಂವಿಧಾನ ದಿನ” ಆಚರಣೆ

Update: 2024-11-26 17:10 IST

ರಾಯಚೂರು : ನ.26 ಸ್ವತಂತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ವದ ದಿನವಾಗಿದೆ. 1949ರ ನ.26ರಂದು ಸಂವಿಧಾನವನ್ನು ಅಳವಡಿಸಿಕೊಂಡ ಹಿನ್ನಲೆಯಲ್ಲಿ ಇಂದು ನ.26ರ ಮಂಗಳವಾರದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅವರ ನೇತೃತ್ವದಲ್ಲಿ ಭಾರತದ ಸಂವಿಧಾನ ಪಿಠೀಕೆ ಓದುವ ಮೂಲಕ ಭಾರತದ ಸಂವಿಧಾನ ದಿನ ಆಚರಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ, ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದ, ಆಹಾರ ಇಲಾಖೆಯ ಉಪ ನಿರ್ದೇಶಕರಾದ ಕೃಷ್ಣ, ಪಶು ಸಂಗೋಪನಾ ಇಲಾಖೆಯ ನಿರ್ದೇಶಕರಾದ ಅಶೋಕ ಕೋಲಕಾರ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಶ್ರೀಶೈಲ ಸಿ.ಕಾಚಾಪೂರ, ಸಿಡಾಕ್ ಜಂಟಿ ನಿರ್ದೇಶಕರಾದ ಜಿ.ಯು.ಹುಡೇದ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಂದ್ರ ಜಾಲ್ದಾರ್, ಕೈಗಾರಿಕೆ ಇಲಾಖೆಯ ಉದ್ಯೋಗಾಧಿಕಾರಿ ಬಸವರಾಜ ಯರಕಂಚಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು, ಹಾಗೂ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ನಿಲಯದ ನಿಲಯಪಾಲಕರು, ವಿವಿಧ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಇದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News