ರಾಯಚೂರು: ಯುವ ಜನಾಂಗವು ದುಶ್ಚಟಗಳಿಂದ ದೂರ ಇರುವ ಮೂಲಕ ಮಹರ್ಷಿ ವಾಲ್ಮೀಕಿಯವರ ಜೀವನ ಚರಿತ್ರೆಯಿಂದ ಸ್ಫೂರ್ತಿ ಪಡೆಯಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ ಅವರು ಹೇಳಿದರು.

ಅಕ್ಟೋಬರ್ 26ರ ಸೋಮವಾರದಂದು ನಗರದ ಆಶಾಪೂರ ರಸ್ತೆಯ ವಾಲ್ಮೀಕಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.

ವಾಲ್ಮೀಕಿಯವರು ಹಲವಾರು ವರ್ಷಗಳ ಕಾಲ ತಪಸ್ಸು ಮಾಡುವಾಗ ನಾರದ ಮುನಿಯವರು ಬಂದು ಅವರಿಗೆ ದರ್ಶನ ನೀಡಿದರು. ಬಳಿಕ ಅವರು ಮರಾ ಎಂಬ ಮಂತ್ರವನ್ನು ಜಪಿಸುತ್ತಾ 'ರಾಮ' ನಾಮವನ್ನು ಸಿದ್ಧಿಸಿಕೊಳ್ಳುವ ಮೂಲಕ ಮಹಾಕಾವ್ಯವಾದ ರಾಮಾಯಣವನ್ನು ರಚಿಸಿದರು. 24,000 ಶ್ಲೋಕಗಳನ್ನು 7 ಭಾಗಗಳಲ್ಲಿ ರಚಿಸಿರುವ ರಾಮಾಯಣವು ನಮ್ಮ ಭಾರತ ವರ್ಷದ ಅತಿ ಪವಿತ್ರವಾದ ಗ್ರಂಥವಾಗಿದೆ ಎಂದರು.

ಈ ವೇಳೆ ಉಪನ್ಯಾಸಕರಾಗಿ ಡಾ.ಬಸವರಾಜ ಮಾತನಾಡಿ, ರಾಯಚೂರು ವಿಶ್ವವಿದ್ಯಾನಿಲಯವನ್ನು ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ನಾಮಕರಣ ಆಯಿತು, ಅದರ ಒಳಗೆ ವಾಲ್ಮೀಕಿ ಅಧ್ಯಯನ ಪೀಠವನ್ನು ಸ್ಥಾಪಿಸಬೇಕು. ವಾಲ್ಮೀಕಿ ಪೀಠ ಅಧ್ಯಯನದ ಅಗತ್ಯ ಹಿನ್ನೆಲೆಯಲ್ಲಿಯೇ ನಾವು ವಾಲ್ಮೀಕಿ ಸಮುದಾಯದ ಅಧ್ಯಯನವನ್ನು ಮಾಡುವಂತಹ ಅವಕಾಶಗಳು ಸಿಗುತ್ತವೆ ಎಂದರು.

ಈ ವೇಳೆ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಗಣ್ಯರಿಂದ ಸನ್ಮಾನಿಸಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ, ರಾಯಚೂರು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತ ಮುರಳೀಧರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೃಷ್ಣ ಶಾವಂತಗೇರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸುನೀತಾ, ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಿ.ವೈ.ವಾಲ್ಮೀಕಿ, ನಿವೃತ್ತ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ವೆಂಕಟೇಶ, ಸಮಾಜದ ಮುಖಂಡರಾದ ರಘವೀರ್ ನಾಯಕ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಸಮಾಜದವರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor