ರಾಯಚೂರು | ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ; ಸರ್ಕಾರದ ನಿರ್ಲಕ್ಷ್ಯವೇ ಕಾರಣ : ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ
Update: 2025-06-05 21:27 IST
ರಾಯಚೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಗೃಹ ಸಚಿವ ಜಿ.ಪರಮೇಶ್ವರ್ ಅವರು ರಕ್ಷಣಾ ವಿಷಯದಲ್ಲಿ ವಿಫಲರಾಗಿದ್ದು, ರಾಜೀನಾಮೆ ನೀಡಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ ಒತ್ತಾಯಿಸಿದರು.
ಅವರಿಂದು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಕ್ರೀಡಾಪಟುಗಳಿಗೆ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಹರಿದು ಬಂದಿದ್ದು, ಅದನ್ನು ನಿಭಾಯಿಸುವಲ್ಲಿ ಸರ್ಕಾರ ಯಾವುದೇ ಪೂರ್ವ ಸಿದ್ಧತೆ ಮಾಡಿಕೊಂಡಿಲ್ಲ. ಅಮಾಯಕರ ಸಾವಿಗೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದರು.
ರಾಜ್ಯದ ಪೊಲೀಸ್ ಠಾಣೆಗಳು ಇಂದು ಕಾಂಗ್ರೆಸ್ ಕಚೇರಿಗಳಾಗಿ ಮಾರ್ಪಟ್ಟಿದೆ. ಸರ್ಕಾರದ ವಿರುದ್ಧ ಧ್ವನಿ ಎತ್ತುವವರ ಮೇಲೆ ಎಫ್‌ಐಆರ್‌ಗಳ ಅಸ್ತ್ರ ಪ್ರಯೋಗಿಸಲಾಗುತ್ತಿದೆ. ವಿಪಕ್ಷ ನಾಯಕರ ಮೇಲೆ ಪ್ರಕರಣಗಳು ದಾಖಲಿಸಲಾಗುತ್ತಿದೆ ಎಂದು ದೂರಿದರು.
ಮುಖಂಡ ಜಿ. ಶಂಕರರೆಡ್ಡಿ, ರವೀಂದ್ರ ಜಾಲ್ದರ, ಮಲ್ಲಿಕಾರ್ಜುನ ಹಳ್ಕೂರು, ಜೆ.ಪಿ.ರೆಡ್ಡಿ ಉಪಸ್ಥಿತರಿದ್ದರು.