ರಾಯಚೂರು | ಮದ್ಯ ನಿಷೇಧ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದನೆ : ಹೋರಾಟ ಸ್ಥಗಿತ
Update: 2025-11-27 20:35 IST
ರಾಯಚೂರು: ರಾಜ್ಯದಲ್ಲಿ ಮದ್ಯ ನಿಷೇಧ ಮಾಡಬೇಕು ಎಂದು ಒತ್ತಾಯಿಸಿ ನವೆಂಬರ್ 25ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮದ್ಯ ನಿಷೇಧ ಆಂದೋಲನ ಕರ್ನಾಟಕದಿಂದ ನಡೆಯುತ್ತಿದ್ದ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹಕ್ಕೆ ರಾಜ್ಯ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿರುವುದರಿಂದ ಹೋರಾಟ ಸ್ಥಗಿತಗೊಳಿಸಲಾಯಿತು.
ಧರಣಿ ಸ್ಥಳಕ್ಕೆ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪನವರು ಆಗಮಿಸಿದ್ದರು. ಪ್ರತಿಭಟನಾಕಾರರ ಬೇಡಿಕೆಗಳನ್ನು ಸರಕಾರದ ಜೊತೆ ಚರ್ಚಿಸಿ ತಿಳಿಸುವುದಾಗಿ ಹೇಳಿದರು. ಇದರಿಂದ ಹೋರಾಟ ಸ್ಥಗಿತಗೊಳಿಸಲಾಗಿದೆ ಎಂದು ಮದ್ಯ ನಿಷೇಧ ಹೋರಾಟ ಸಮಿತಿಯ ಸಂಚಾಲಕಿ ವಿದ್ಯಾ ಪಾಟೀಲ್ ತಿಳಿಸಿದರು.