ರಾಯಚೂರು: ಅಂಬೇಡ್ಕರ್ ಪ್ರತಿಮೆಗೆ ಹಾನಿ; ದಲಿತ ಪರ ಸಂಘಟನೆಗಳ ಆಕ್ರೋಶ
Update: 2025-07-04 11:58 IST
ರಾಯಚೂರು: ಮಾನ್ವಿ ತಾಲ್ಲೂಕು ಹರವಿ ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಗುರುವಾರ ರಾತ್ರಿ ಕಿಡಿಗೇಡಿಗಳು ಕಲ್ಲು ಎಸೆದು ಹಾನಿಗೊಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಇದನ್ನು ಖಂಡಿಸಿ ದಲಿತ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕೂಡಲೇ ಜಿಲ್ಲಾಡಳಿತ ತಪ್ಪಿತಸ್ಥರಿಗೆ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.