×
Ad

ರಾಯಚೂರು: ತುರ್ವಿಹಾಳ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ನಿಗದಿ

Update: 2025-11-28 15:00 IST
ಸಾಂದರ್ಭಿಕ ಚಿತ್ರ

ರಾಯಚೂರು: ವಿವಿಧ ಕಾರಣಕ್ಕೆ ತೆರವಾಗಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಚುನಾವಣೆ ಆಯೋಗವು ತುರ್ವಿಹಾಳ ಪಟ್ಟಣ ಪಂಚಾಯ್ತಿ ಸೇರಿ ಇತರೆ ನಗರ ಸ್ಥಳೀಯ ಸಂಸ್ಥೆಗಳ ದಿನಾಂಕ ನಿಗದಿಪಡಿಸಿ ಆದೇಶ ಹೊರಡಿಸಿದೆ.

ಜಿಲ್ಲೆಯ ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣ ಪಂಚಾಯತಿ ತೆರವಾಗಿದ್ದ 4 ಸ್ಥಾನಗಳಿಗೆ ಹಾಗೂ ಹೊಸದಾಗಿ ರಚನೆಯಾಗಿದ್ದ ಸ್ಥಾನಗಳಿಗೆ ಚುನಾವಣಾ ದಿನಾಂಕ ನಿಗದಿಪಡಿಸಿದೆ.

ತುರ್ವಿಹಾಳ ಪಟ್ಟಣ ಪಂಚಾಯತಿಯ 4 ಸ್ಥಾನಗಳಿಗೆ ಡಿಸೆಂಬರ್ 21ಕ್ಕೆ ಚುನಾವಣೆ ನಡೆಸಲು ದಿನಾಂಕ ನಿಗದಿ ಪಡಿಸಿದೆ.ಡಿ.2ಕ್ಕೆ ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದೆ.

ಡಿಸೆಂಬರ್ 9 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು,‌ಡಿಸೆಂಬರ್ 10 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.ಡಿಸೆಂಬರ್ 12 ರಂದು ಉಮೇದುವಾರಿಕೆ ಹಿಂಪಡೆದುಕೊಳ್ಳಲಬಹುದಾಗಿದೆ. ಡಿಸೆಂಬರ್ 21 ರಂದು ಮತದಾನ ಅವಶ್ಯ ವಿದ್ದರೆ ಮತದಾನ ನಡೆಸಲು ಅಂದು ಬೆಳಗ್ಗೆ 7 ರಿಂದ ಸಂಜೆ 5 ರವರೆಗೆ ಚುನಾವಣೆಯನ್ನಯ ನಡೆಸಲು ನಿಗದಿಪಡಿಸಲಾಗಿದೆ ಎಂದು ಚುನಾವಣಾ ಆಯೋಗವು ತಿಳಿಸಿದೆ.

ಮರು ಮತದಾನಕ್ಕೆ ಅವಶ್ಯಕತೆ ಇದ್ದಲ್ಲಿ ಡಿಸೆಂಬರ್ 23 ರಂದು ಬೆಳಗ್ಗೆ 7 ರಿಂದ ಸಂಜೆ 5ರವರೆಗೆ ಮತದಾನ ನಡೆಸಬಹುದಾಗಿದೆ.ಡಿಸೆಂಬರ್ 24 ರಂದು ಮತಗಳ ಏಣಿಕೆಯನ್ನು ತಾಲೂಕು ಕೇಂದ್ರದಲ್ಲಿ ಬೆಳಗ್ಗೆ 8 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಚುನಾವಣಾ ಆಯೋಗವು ತಿಳಿಸಿದೆ.

ನೀತಿ ಸಂಹಿತೆಯು ಚುನಾವಣಾ ಅಧಿಸೂಚನೆ ಹೊರಡಿಸಿದ ದಿನಾಂಕದಿಂದ ಚುನಾವಣಾ ಎಣಿಕೆ ಮುಕ್ತಾಯದವರೆಗೆ ಸ್ಥಳೀಯ ಸಂಸ್ಥೆಗಳ ವಾರ್ಡ್‍ಗಳಲ್ಲಿ ಮಾತ್ರ ಜಾರಿಯಲ್ಲಿರುತ್ತದೆ.

ವಿಧಾನಸಭೆವಾರು ತಯಾರಿಸಿದ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು ತಯಾರಿಸಲಾದ ಮತದಾರರ ಪಟ್ಟಿಯಂತೆ ಚುನಾವಣಾ ನಡೆಯಲಿದೆ.

ಚುನಾವಣಾ ಕಾರ್ಯಕ್ಕೆ ನಿಯೋಜಿಸಿದ ಚುನಾವಣಾ ಅಧಿಕಾರಿಗಳು ಮತ್ತು ಸಹಾಯಕ ಚುನಾವಣಾ ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡುವುದು, ಚುನಾವಣೆಗೆ ಸಂಬಂಧ ಪಟ್ಟ ಎಲ್ಲಾ ಅಗತ್ಯ ಮಾಹಿತಿಯನ್ನು ನೀಡಲಾಗಿದೆ.

ಉಮೇದುವಾರಿಕೊಯೊಂದಿಗೆ ಸಲ್ಲಿಸುವ ಅಭ್ಯರ್ಥಿಗಳು ಹಿನ್ನೆಲೆ, ಚರಾಸ್ತಿ, ಸ್ಥಿರಾಸ್ತಿ , ವಿದ್ಯಾರ್ಹತೆ ಸೇರಿದಂತೆ ಇತರೇ ಮಾಹಿತಿ ಸಲ್ಲಿಸಬೇಕಾಗಿದೆ.ನೀತಿ ಸಂಹಿತೆ ಉಲ್ಲಂಘನೆ‌ಯಾಗಿದಲ್ಲಿ ಕ್ರಮ ಕೈಗೊಳ್ಳಲು ಜಿಲ್ಲಾ ಚುನಾವಣಾ ಅಧಿಕಾರಿಗೆ ತಿಳಿಸಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News