×
Ad

ರಾಯಚೂರು | ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

Update: 2026-06-08 18:15 IST

ರಾಯಚೂರು: ಶಾಸಕ ತನ್ವಿರ್ ಸೇಠ್ ಅವರಿಗೆ ಕರ್ನಾಟಕ ಸರಕಾರದ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನ ನೀಡುವಂತೆ ತನ್ವೀರ್‌ ಸೇಠ್ ಅಭಿಮಾನಿ ಬಳಗದ ಅಧ್ಯಕ್ಷ ಆದಿಲ್ ಶೇಕ್ ಮನವಿ ಮಾಡಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಆದಿಲ್ ಶೇಕ್, ತನ್ವೀರ್ ಸೇಠ್ ಅವರು ಸೌಹಾರ್ದತೆ,  ಪ್ರಾಮಾಣಿಕತೆಯ ಪ್ರತೀಕವಾಗಿದ್ದು, ದೂರದೃಷ್ಟಿಯ ನಾಯಕ ಹಾಗೂ ಸಾರ್ವಜನಿಕ ಸೇವಕರಾಗಿದ್ದಾರೆ. ಅವರಿಗೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕರ್ತವ್ಯ ನಿರ್ವಹಿಸಿದ ಅನುಭವವೂ ಇದೆ.

ತಮ್ಮ ಸಾರ್ವಜನಿಕ ಜೀವನದ ಅವಧಿಯಲ್ಲಿ ಎಲ್ಲ ವರ್ಗದ ಜನರನ್ನು ಗೌರವ ಮತ್ತು ಘನತೆಯಿಂದ ನಡೆಸಿಕೊಂಡಿರುವ ಅವರು, ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಯಾವುದೇ ಭೇದಭಾವವಿಲ್ಲದೆ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು. 

ಕರ್ನಾಟಕ ವಿಧಾನಸಭೆಗೆ ಸತತ ಆರು ಬಾರಿ ಆಯ್ಕೆಯಾಗಿರುವ ಅವರು, ಎರಡು ಬಾರಿ ಸಚಿವ ಸಂಪುಟ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.  ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಪಕ್ಷ ಸಂಘಟನೆಗೆ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.

ಈ ವೇಳೆ ಅಜ್ಜು ಸೌಧಗರ್, ರೆಹ್ಮತ್, ಮಂಜು ಹಾನಗಲ್, ಮಹಮದ್ ಖಾದ್ರಿ, ಫಾತಿಮಾ ಹುಸೇನ್ ಹಾಗೂ ಖಾಜಾವಲಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News