×
Ad

ರಾಯಚೂರು | ಆರೋಗ್ಯ ಕೇಂದ್ರಗಳಿಗೆ ಡಿಎಚ್ಒ ಭೇಟಿ ; ಪರಿಶೀಲನೆ

Update: 2025-01-31 15:41 IST

ರಾಯಚೂರು : ತಾಲೂಕಿನ ಉಡುಮಗಲ್ ಖಾನಾಪುರ ಹಾಗೂ ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜ.30ರ ಗುರುವಾರ ದಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಅವರು ಭೇಟಿ ನೀಡಿ ಪರಿಶೀಲಿಸಿದರು.

ಒಳ ರೋಗಿ, ಹೊರ ರೋಗಿಗಳಿಗೆ ಕೊಡುತ್ತಿರುವ ಚಿಕಿತ್ಸಾ ವಿಧಾನ ಮತ್ತು ಗರ್ಭೀಣಿಯರಿಗೆ ಹಾಗೂ ಬಾಣಂತಿಯರಿಗೆ ನೀಡುತ್ತಿರುವ ಔಷಧಿಯ ಬಗ್ಗೆ ಮಾಹಿತಿ ಪಡೆದರು. ಆರೈಕೆಯ ವಿಧಾನ, ಪೂರ್ವ ಕ್ರಮಗಳ ಬಗ್ಗೆ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಸಲಹೆ ನೀಡಿದರು.

ಸಕಾಲಕ್ಕೆ ಚಿಕಿತ್ಸೆ ಪಡೆದು, ಪೌಷ್ಠಿಕಯುಕ್ತ ಆಹಾರ ಸೇವನೆ ಮಾಡಿ ಆರೋಗ್ಯದತ್ತ ಗಮನ ಹರಿಸುವಂತೆ ತಿಳಿಸಿದರು.

ಗರ್ಭಿಣಿಯರಿಗೆ ಚಿಕಿತ್ಸೆ ಮತ್ತು ಆರೈಕೆ ಮಾಡುವಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಅವರ ಆರೋಗ್ಯದ ಬಗ್ಗೆ ನಿರಂತರವಾಗಿ ಗಮನಹರಿಸಿ ತುರ್ತು ಸಂದರ್ಭದಲ್ಲಿ ಸಕಾಲಕ್ಕೆ ಹೆರಿಗೆಗಾಗಿ ಜಿಲ್ಲಾಮಟ್ಟದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕೆಂದು ಆಶಾ ಕಾರ್ಯಕರ್ತರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಕೇಂದ್ರದ ವೈದ್ಯರು, ಸಿಬ್ಬಂದಿ ವರ್ಗ ಹಾಜರಿದ್ದರು. ಆಶಾ ಕಾರ್ಯಕರ್ತೆಯರು ಸೇರಿದಂತೆ ಇತರರು ಇದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News