ರಾಯಚೂರು | ಜಿಲ್ಲಾಡಳಿತದ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ
ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜು.15ರಂದು ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಿಸಲಾಯಿತು.
ಜಯಂತ್ಯುತ್ಸವ ನಿಮಿತ್ತ ಬೆಳಗ್ಗೆ ಬಸವೇಶ್ವರ ವೃತ್ತದಿಂದ ಆರಂಭಗೊಂಡ ಶ್ರೀ ಶಿವಶರಣ ಹಡಪದ ಅಪ್ಪಣ್ಣ ಅವರ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಚಾಲನೆ ನೀಡಿದರು. ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ರಂಗಮಂದಿರಕ್ಕೆ ಬಂದು ಸೇರಿತು. ಸಮಾಜದ ಮುಖಂಡರು, ಅಧಿಕಾರಿಗಳು ಮತ್ತು ನಾಗರಿಕರು ರಂಗಮಂದಿರದವರೆಗೆ ಮೆರವಣಿಗೆಯಲ್ಲಿ ಸಾಲಾಗಿ ಸಾಗಿ ಮೆರವಣಿಗೆಯ ಕಳೆ ಹೆಚ್ಚಿಸಿದರು.
ರಂಗಮಂದಿರದಲ್ಲಿ ನಡೆದ ವೇದಿಕೆಯ ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆಯ ಉಪಾಧ್ಯಕ್ಷರು ಆಗಿರುವ ಪ್ರಭಾರ ಅಧ್ಯಕ್ಷರಾದ ಜೆ.ಸಾಜಿದ್ ಸಮೀರ್ ಅವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಹಟ್ಟಿ ಸರ್ಕಾರಿ ಪಿಯು ಕಾಲೇಜಿನ ಪ್ರಾಚಾರ್ಯರಾದ ಕಮಲಾಬಾಯಿ ಅವರು ಶ್ರೀ ಶಿವಶರಣ ಹಡಪದ ಅಪ್ಪಣ್ಣ ಅವರ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಸಾಧಕರಿಗೆ ಸನ್ಮಾನ:
ಎಸೆಸೆಲ್ಸಿ, ಪಿಯುಸಿಯಲ್ಲಿ ಯಶಸ್ಸು ಸಾಧಿಸಿದ ಹಡಪದ ಅಪ್ಪಣ್ಣ ಸಮಾಜದ ವಿದ್ಯಾರ್ಥಿಗಳಿಗೆ, ಸರ್ಕಾರಿ ಸೇವೆಯಲ್ಲಿದ್ದು ನಿವೃತ್ತರಾದವರಿಗೆ ಸನ್ಮಾನಿಸಿ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಭಾಗವಹಿಸದ ಕಾರಣ ಸಮಾಜದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಪರಶುರಾಮ್, ಹಡಪದ ಅಪ್ಪಣ್ಣ ಸಮಾಜದ ಗದ್ದೆಪ್ಪ ಎಂ., ಮಹಾಬಲೇಶ್ವರಪ್ಪ, ಕರಿಬಸವ ಗಟ್ಟಿಬಿಚ್ಚಾಲೆ, ನಾಗರಾಜ್ ಸರ್ಜಾಪುರ, ಧನಂಜಯ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಶಿವಣ್ಣ, ಮುಖಂಡರಾದ ಮರಿಸ್ವಾಮಿ ಗಟ್ಟಿಬಿಚ್ಚಾಳಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.