×
Ad

ರಾಯಚೂರು: ಜಿಲ್ಲಾಡಳಿತದಿಂದ ವಿಶ್ವಮಾನವ ದಿನಾಚರಣೆ

Update: 2024-12-29 14:21 IST

ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಡಿ.29ರಂದು ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆಯನ್ನು ಆಚರಿಸಲಾಯಿತು.

ದೇಶದ ಮಾಜಿ ಪ್ರಧಾನಮಂತ್ರಿಗಳಾದ ಡಾ.ಮನಮೋಹನ ಸಿಂಗ್ ಅವರ ನಿಧನದಿಂದಾಗಿ ಶೋಕಾಚರಣೆ ಜಾರಿ ಇರುವ ಹಿನ್ನೆಲೆಯಲ್ಲಿ, ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿ, ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಹ ಕಾರ್ಯದರ್ಶಿಯಾದ ಡಾ.ದಂಡಪ್ಪ ಬಿರಾದಾರ, ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವೆಂಕಟೇಶ, ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ಪದಾಧಿಕಾರಿಗಳಾದ ರಾವತ್ ರಾವ್ ಬರೂರ. ರೇಖಾ ಬಡಿಗೇರ್, ರಾಮಣ್ಣ ಬೋಯರ್, ಎಸ್ ಎಸ್ ಮಾದರವರು. ಎಸ್.ಕೆ.ಇ.ಪ್ಯಾರಾಮೆಡಿಕಲ್ ಸಂಸ್ಥೆಯ ಸಂಯೋಜಕರಾದ ಶರಣಪ್ಪ ನಂದ್ಯಾಳ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News