×
Ad

ರಾಯಚೂರು | ಪಿ.ಎಂ.ಶ್ರೀ ಸರ್ಕಾರಿ ಶಾಲೆಗೆ ನಿಮ್ಮ ಮಕ್ಕಳನ್ನು ದಾಖಲಿಸಿ : ಸತೀಶ್‌ ಕುಮಾರ್

Update: 2025-05-28 19:46 IST

ರಾಯಚೂರು : ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನೀರ ಮಾನವಿಯಲ್ಲಿ 2025 26ನೇ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಗ್ರಾಮದ ಸುತ್ತಮುತ್ತಲಿನ ಅರ್ಹವಯಸ್ಸಿನ ಎಲ್ಲಾ ವಿದ್ಯಾರ್ಥಿಗಳನ್ನು ನಮ್ಮ ಶಾಲೆಗೆ ದಾಖಲಿಸಬೇಕೆಂದು ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನೀರ ಮಾನವಿ ಪ್ರಭಾರಿ ಮುಖ್ಯ ಶಿಕ್ಷಕ ಸತೀಶ ಕುಮಾರ್ ಮನವಿ ಮಾಡಿದರು.

ನಮ್ಮ ಶಾಲೆಯು ವಿಶೇಷ ಶಾಲೆಯಾಗಿದ್ದು,  ಉದಯೋನ್ಮುಖ ಭಾರತಕ್ಕಾಗಿ ಪ್ರಧಾನಮಂತ್ರಿಗಳ ಶಾಲೆಯಾಗಿದ್ದು, ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಭೌತಿಕವಾಗಿ ಉತ್ತಮ ಶಾಲಾ ಕೊಠಡಿ, ಪೀಠೋಪಕರಣಗಳು, ಪಾಠೋಪಕರಣಗಳು ಹಾಗೂ ಅನುಭವಿ ನುರಿತ ಶಿಕ್ಷಕರಿಂದ ಬೋಧನೆ ಮಾಡಲಾಗುತ್ತಿದೆ.

ಪ್ರಾಥಮಿಕ ಹಂತದಲ್ಲಿಯೇ ಕಂಪ್ಯೂಟರ್ ಶಿಕ್ಷಣ, ಸ್ಮಾರ್ಟ್ ಕ್ಲಾಸ್ ಮೂಲಕ ಬೋಧನೆ, ಯೋಗ ತರಬೇತಿ, ಹೆಣ್ಣು ಮಕ್ಕಳ ಸುರಕ್ಷತೆಗಾಗಿ ಕರಾಟೆ ತರಬೇತಿ, ವೃತ್ತಿ ಮತ್ತು ಸುರಕ್ಷಣಾ ತರಬೇತಿ, ಇನ್ನಿತರ ಅನೇಕ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಮಧ್ಯಾಹ್ನದ ಬಿಸಿಯೂಟ ,ಕ್ಷೀರ ಭಾಗ್ಯ, ಪ್ರತಿ ವಿದ್ಯಾರ್ಥಿಗಳಿಗೂ ದೈಹಿಕ ಮತ್ತು ಪೌಷ್ಟಿಕಾಂಶ ಯುಕ್ತ ಬೆಳವಣಿಗೆಗಾಗಿ ವಾರದ ಆರು ದಿನಗಳು ಮೊಟ್ಟೆ ಮತ್ತು ಬಾಳೆಹಣ್ಣು ನೀಡಲಾಗುವುದು.

ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಉಚಿತ ಶೂ ಮತ್ತು ಸಾಕ್ಸ್ ವಿತರಣೆ, ಇನ್ನಿತರ ಸರ್ಕಾರದ ಉಚಿತ ಸೌಲಭ್ಯಗಳ ಜೊತೆಗೆ ಗುಣಾತ್ಮಕ ಶಿಕ್ಷಣವನ್ನು ನೀಡಲಾಗುತ್ತಿದ್ದು, ವಿದ್ಯಾರ್ಥಿಗಳ ಉದಯೋನ್ಮುಖ ಬೆಳವಣಿಗೆಗಾಗಿ ಶಾಲೆಯು ವಿಶೇಷ ಕಾಳಜಿಯನ್ನು ವಹಿಸಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ತಮ್ಮ ವಿದ್ಯಾರ್ಥಿಗಳ ಗುಣಾತ್ಮಕ ಶಿಕ್ಷಣಕ್ಕಾಗಿ ಅರ್ಹವಯಸ್ಸಿನ ಎಲ್ಲಾ ವಿದ್ಯಾರ್ಥಿಗಳನ್ನು ಯಾವುದೇ ಶುಲ್ಕವು ಇಲ್ಲದೆ ನಮ್ಮ ಶಾಲೆಗೆ ದಾಖಲಿಸಬೇಕಾಗಿ ಈ ಮೂಲಕ ಕೋರಲಾಗಿದೆ ಎಂದು ತಿಳಿಸಿದ್ದಾರೆ.

ಕಂಪ್ಯೂಟರ್ ಶಿಕ್ಷಣ ಮತ್ತು ಆಂಗ್ಲ ಭಾಷೆ ಯಲ್ಲಿ ಅಭ್ಯಸಿಸಿರುವ ಅಭ್ಯರ್ಥಿಗಳಿಗೆ ಆದ್ಯತೆಯನ್ನು ನೀಡಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನೀರ ಮಾನವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರಾಟೆ ಬಲ್ಲ ಮಹಿಳಾ ಅಭ್ಯರ್ಥಿಗಳಿಗೆ ಆರರಿಂದ ಎಂಟನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣೆಗಾಗಿ ತರಬೇತಿ ನೀಡಲು ಅವಕಾಶವಿದ್ದು, ಸಂಬಂಧಿಸಿದವರು ಅರ್ಜಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News