ರಾಯಚೂರು | ಯುವನಿಧಿ ಯೋಜನೆ ನೋಂದಣಿಗೆ ಫೆ.15ರವರೆಗೆ ಅವಧಿ ವಿಸ್ತರಣೆ
ರಾಯಚೂರು : ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಗೆ ನೋಂದಣಿ ಅವಧಿಯನ್ನು ಫೆ.15ರವರೆಗೆ ವಿಸ್ತರಿಸಲಾಗಿದೆ.
2022–23 ಮತ್ತು 2023–24ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾ ಉತ್ತೀರ್ಣರಾಗಿ ಉದ್ಯೋಗ ಸಿಗದ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ವೆಬ್‌ಸೈಟ್ https://sevasindhugs.karnataka.gov.in ಮೂಲಕ ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ. ಡಿಪ್ಲೊಮಾ ತೇರ್ಗಡೆಯಾದವರಿಗೆ 1,500 ರೂ. ನಿರುದ್ಯೋಗಿ ಭತ್ಯೆ ನೀಡಲಾಗುತ್ತದೆ. ಫಲಿತಾಂಶ ಪ್ರಕಟವಾದ 180 ದಿನಗಳ ನಂತರ ಹೆಸರನ್ನು ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 18005997154 ಅಥವಾ 08532-231684ಗೆ ಸಂಪರ್ಕಿ ಮಾಡಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಜಿಲ್ಲಾ ಉದ್ಯೋಗಾಧಿಕಾರಿಯಾದ ನವೀನ್ ಕುಮಾರ್ ಸಂಗೇಪಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.