Raichur | ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಇಬ್ಬರ ಬಂಧನ
Update: 2026-05-17 12:37 IST
ಬಂಧಿತ ಆರೋಪಿಗಳು
ಲಿಂಗಸುಗೂರು: ಪಟ್ಟಣದ ಜನತಾ ಕಾಲೋನಿಯಲ್ಲಿ ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳ ಮೇಲೆಯೇ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
ಸುಮಾರು ಎರಡು ವರ್ಷಗಳಿಂದ ಬಾಲಕಿಯ ಮೇಲೆ ದೌರ್ಜನ್ಯ ಎಸಗಲಾಗುತ್ತಿದ್ದು, ಈ ವಿಷಯವನ್ನು ಯಾರಿಗೂ ತಿಳಿಸಬಾರದು ಎಂದು ಆರೋಪಿ ಮಗಳಿಗೆ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ತಂದೆಯ ಬೆದರಿಕೆ ಮತ್ತು ಭಯದಿಂದ ಬಾಲಕಿ ಮೌನವಾಗಿಯೇ ನೋವು ಅನುಭವಿಸುತ್ತಿದ್ದಳು ಎನ್ನಲಾಗಿದೆ.
ಅಲ್ಲದೇ ಆರೋಪಿ ತನ್ನ ಸ್ನೇಹಿತನನ್ನೂ ಈ ಕೃತ್ಯದಲ್ಲಿ ಭಾಗಿಯಾಗಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ಬೇಸತ್ತ ಬಾಲಕಿ ಪೊಲೀಸರ ಮೊರೆ ಹೋಗಿದ್ದು, ದೂರು ಆಧರಿಸಿ ಪೊಲೀಸರು ಇಬ್ಬರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.