Raichur : ಗರ್ಭಿಣಿ ಸೊಸೆಯನ್ನು ಕತ್ತು ಸೀಳಿ ಕೊಂದ ಮಾವ
Update: 2026-01-29 09:00 IST
ಮೃತ ರೇಖಾ | ಆರೋಪಿ ಸಿದ್ದಪ್ಪ
ರಾಯಚೂರು: ನಾಲ್ಕು ತಿಂಗಳ ಗರ್ಭಿಣಿ ಸೊಸೆಯನ್ನು ಮಾವನೇ ಕತ್ತು ಸೀಳಿ ಕೊಂದ ಭೀಕರ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅಣಗಿ ಗ್ರಾಮದಲ್ಲಿ ನಡೆದಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವ ಸಿದ್ದಪ್ಪ ಎಂಬಾತ ತನ್ನ ನಾಲ್ಕು ತಿಂಗಳ ಗರ್ಭಿಣಿ ಸೊಸೆ ರೇಖಾ (25) ಅವರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ರೇಖಾ ಮನೆಯಿಂದ ಹೊರಬಂದು ನರಳಾಡಿ, ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕೃತ್ಯ ನಡೆಸಿದ ಬಳಿಕ ಆರೋಪಿ ಸಿದ್ದಪ್ಪ ಪರಾರಿಯಾಗಿದ್ದರೂ, ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.