Raichur | ಜವಾಹರನಗರದ ಕಾಲೇಜಿನಲ್ಲಿ ಶಾಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ
Update: 2026-05-12 22:32 IST
ರಾಯಚೂರು: ಇಲ್ಲಿನ ಜವಾಹರನಗರದ ದೂದಬೆನ್ ಠಾಕರ್ಸಿ ಜೋಬನ ಬಾಲಕಿಯರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶಾಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಕಾಲೇಜಿನ ಅಡುಗೆ ಕೋಣೆಯಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಅನೇಕ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.