ರಾಯಚೂರು | ಟೀ ಅಂಗಡಿಯಲ್ಲಿ ಶಾಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ
Update: 2025-12-25 23:21 IST
ರಾಯಚೂರು : ನಗರದ ಮಂತ್ರಾಲಯ ರಸ್ತೆಯಲ್ಲಿ ಇರುವ ದಿ. ಟೀ ಟೋಸ್ಟ್ ಕೋ ಅಂಗಡಿಯಲ್ಲಿ ಇಂದು ಬೆಳಿಗ್ಗೆ ಶಾಟ್ ಸರ್ಕ್ಯೂಟ್ ಸಂಭವಿಸಿ ಅಗ್ನಿ ಅವಘಡ ಸಂಭವಿಸಿದೆ.
ಬೆಳ್ಳಂಬೆಳಿಗ್ಗೆ ಅಂಗಡಿಯಲ್ಲಿ ಶಾಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ಪೀಠೋಪಕರಣಗಳು, ಟೀ ಪೌಡರ್ ಸೇರಿದಂತೆ ಅನೇಕ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.