ರಾಯಚೂರು | ಶಾರ್ಟ್ ಸರ್ಕ್ಯೂಟ್‌ನಿಂದ ದನದ ಶೆಡ್‌ಗೆ ಬೆಂಕಿ: ಹಸು ಸಾವು, ವ್ಯಕ್ತಿಗೆ ಗಂಭೀರ ಗಾಯ
ರಾಯಚೂರು : ರಾಯಚೂರು ತಾಲೂಕಿನ ಮಾಸದೊಡ್ಡಿ ಗ್ರಾಮದಲ್ಲಿ ದನದ ಶೆಡ್‌ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಒಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡು, ಒಂದು ಹಸು ಸಾವನ್ನಪ್ಪಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ರಾತ್ರಿ 7.30ರ ಸುಮಾರಿಗೆ ಸಂಭವಿಸಿದ ಈ ಅವಘಡದಲ್ಲಿ ಗಾಯಗೊಂಡ ವ್ಯಕ್ತಿಯನ್ನು ದೊಡ್ಡ ಮಲ್ಲಯ್ಯ (65) ಎಂದು ಗುರುತಿಸಲಾಗಿದೆ. ದನದ ಶೆಡ್‌ನಲ್ಲೇ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಪರಿಣಾಮವಾಗಿ ಅವರ ಎದೆ ಹಾಗೂ ಕಾಲುಗಳಿಗೆ ಗಂಭೀರ ಸುಟ್ಟ ಗಾಯಗಳಾಗಿವೆ.
ಘಟನೆ ಬಳಿಕ ಸ್ಥಳೀಯರು ತಕ್ಷಣ ಆಂಬುಲೆನ್ಸ್‌ಗೆ ಮಾಹಿತಿ ನೀಡಿ, ಗಾಯಾಳುವನ್ನು ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದು, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಎಫ್‌ಎಸ್‌ಒ ರಾಜು, ಎಫ್‌ಡಿ ಬಸವರಾಜ, ರಾಘವೇಂದ್ರ ಹಾಗೂ ನಾಗರಾಜ ಭಾಗವಹಿಸಿದ್ದರು.