Raichur | ಎಪಿಎಂಸಿಯ ಗೋದಾಮಿನಲ್ಲಿ ಅಗ್ನಿ ಅವಘಡ: 30 ಲಕ್ಷ ರೂ. ಮೌಲ್ಯದ ವಸ್ತುಗಳು ಭಸ್ಮ

Update: 2026-08-11 21:07 IST

ಸಾಂದರ್ಭಿಕ ಚಿತ್ರ | AI

ರಾಯಚೂರು: ನಗರದ ಎಪಿಎಂಸಿ ವ್ಯಾಪ್ತಿಯ ಪಟೇಲ್‌ಗಂಜ್‌ನಲ್ಲಿ ಗೋದಾಮೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 30 ಲಕ್ಷ ರೂ. ಮೌಲ್ಯದ ಕಿರಾಣಿ ಹಾಗೂ ಪೂಜಾ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ.

ರಾಜು ಪಾಟೀಲ್ ಅವರಿಗೆ ಸೇರಿದ ರಾಜರಾಮ್ ಟ್ರೇಡರ್ಸ್‌ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗೋದಾಮಿನಲ್ಲಿ ಡ್ರೈಫ್ರೂಟ್ಸ್, ದವಸ-ಧಾನ್ಯ ಸೇರಿದಂತೆ ವಿವಿಧ ಕಿರಾಣಿ ಸಾಮಗ್ರಿಗಳು ಹಾಗೂ ಪೂಜಾ ಸಾಮಗ್ರಿಗಳನ್ನು ಸಂಗ್ರಹಿಸಲಾಗಿತ್ತು.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News