×
Ad

ರಾಯಚೂರು | ನಾಲ್ಕು ಕಾರ್ಮಿಕ ಸಂಹಿತೆಗಳಿಂದ ಕಾರ್ಮಿಕರ ಹಕ್ಕುಗಳು ನಾಶ : ಅಪ್ಪಣ್ಣ

Update: 2025-05-10 21:37 IST

ರಾಯಚೂರು : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 44 ಕಾರ್ಮಿಕ ಕಾಯ್ದೆಗಳನ್ನು ಕೇವಲ ನಾಲ್ಕು ಸಂಹಿತೆಗಳನ್ನಾಗಿ ಮಾಡಲು ಹೊರಟಿದೆ. ಇವುಗಳನ್ನು ಕಾರ್ಮಿಕರ ಮೇಲೆ ಹೇರುವ ಹುನ್ನಾರವಾಗಿದೆ. ಇದರಿಂದಾಗಿ ಕಾರ್ಮಿಕರು ತಮ್ಮ ಹಕ್ಕುಗಳನ್ನು ಕಳೆದುಕೊಳ್ಳಲಿದ್ದಾರೆ ಎಂದು ಎಐಸಿಸಿಟಿಯು ರಾಜ್ಯ ಅಧ್ಯಕ್ಷ ಅಪ್ಪಣ್ಣ ಅವರು ಆರೋಪಿಸಿದರು.

ನಗರದ ಕನ್ನಡ ಭವನದಲ್ಲಿ ಶನಿವಾರ ಕಾರ್ಮಿಕ ಸಂಘಗಳ ಜಂಟಿ ಸಮಿತಿಯ ಜಿಲ್ಲಾ ಘಟಕದಿಂದ ಏರ್ಪಡಿಸಿದ್ದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಪೋರೇಟ್ ಪರ ಆಡಳಿತ ಮಾಡುತ್ತಿರುವ ಕೇಂದ್ರ ಸರ್ಕಾರ ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡುವ ಮೂಲಕ ಕಾರ್ಮಿಕರಿಗೆ ಇದುವರೆಗೂ ಇದ್ದ ಹಕ್ಕನ್ನು ಕಸಿದುಕೊಳ್ಳಲಿದೆ. ಇನ್ನು ಮುಂದೆ ಕಾರ್ಮಿಕರು ಸಂಘಗಳನ್ನು ಕಟ್ಟುವಂತಿಲ್ಲ ತಮ್ಮ ಬೇಡಿಕೆಗಳಿಗಾಗಿ ಹೋರಾಟಗಳನ್ನು ಮಾಡದಂತೆ ಕಾರ್ಮಿಕರನ್ನು ಶೋಷಣೆಗೊಳಪಡಿಸಲಾಗುತ್ತಿದೆ ಎಂದು ಹೇಳಿದರು.

ಅಲ್ಲದೇ ಸರ್ಕಾರದ ಪೂರ್ವಾನುಮತಿ ಇಲ್ಲದೆ ಮಾಲಕರು ಯಾವಾಗ ಬೇಕಾದರೂ ಕಾರ್ಖಾನೆ ತೆರೆಯಬಹುದು ಅಥವಾ ಮುಚ್ಚಬಹುದು. ಈ ಸ್ವಾತಂತ್ರ್ಯವನ್ನು ಮಾಲಕರಿಗೆ ನೀಡಲಾಗಿದೆ. ಇದರಿಂದಾಗಿ ಕಾರ್ಮಿಕರಿಗೆ ತಮ್ಮ ಉದ್ಯೋಗದ ಭದ್ರತೆ ಇಲ್ಲದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ನಾಲ್ಕು ಸಂಹಿತೆಗಳ ವಿರುದ್ಧ ಮೇ 20ರಂದು ಅಖಿಲ ಭಾರತದಲ್ಲಿ ನಡೆಯುವ ಕಾರ್ಮಿಕರ ಮುಷ್ಕರವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಎನ್.ಎಸ್.ವೀರೇಶ್, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎಸ್. ಶರಣಬಸವ, ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಸಂಚಾಲಕರಾದ ಕೆ ಜಿ ವೀರೇಶ್ ಮಾತನಾಡಿದರು. ಅಧ್ಯಕ್ಷತೆಯನ್ನು ಸಿಐಟಿಯು ಜಿಲ್ಲಾಧ್ಯಕ್ಷರಾದ ಎಚ್.ಪದ್ಮಾ ವಹಿಸಿದ್ದರು.

ಜೆಸಿಟಿಯು ಮುಖಂಡರಾದ ಎಂ.ರವಿ, ಮಲ್ಲಪ್ಪ ಧಣಿ, ಬಾಷುಮಿಯ, ತಿಮ್ಮಾರೆಡ್ಡಿ, ಡಿ.ಎಚ್. ಕಂಬಳಿ, ನಾಗರಾಜ ಪೂಜಾರ್, ತಿಮ್ಮಪ್ಪಸ್ವಾಮಿ, ಮಹೇಶ್, ಕಾಶಪ್ಪ, ಎಸ್.ಎನ್.ಪೀರ ಹಾಗೂ ಮತ್ತಿತರರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News