ರಾಯಚೂರು | ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಐವರು ಆರೋಪಿಗಳ ವಿರುದ್ಧ ಪೊಕ್ಸೊ ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ (Photo: PTI)
ರಾಯಚೂರು: ಪ್ರೀತಿಯ ಹೆಸರಿನಲ್ಲಿ ಬಾಲಕಿಯನ್ನು ಫುಸಲಾಯಿಸಿದ್ದಲ್ಲದೆ ಆಕೆಯನ್ನು ಅಪಹರಿಸಿ ಮನೆಯಲ್ಲಿ ಕೂಡಿ ಹಾಕಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿದೆ.
ಮೌನೇಶ್ (23), ಮೌನೇಶ್(40), ಬೀರಪ್ಪ(42), ಮಲ್ಲಿ ಅಲಿಯಾಸ್ ಮಲ್ಲೇಶ್(45) ಹಾಗೂ ವೀರೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ.
ಆರೋಪಿಗಳು ಪ್ರೀತಿಯ ಹೆಸರಿನಲ್ಲಿ ಬಾಲಕಿಯನ್ನು ಪುಸಲಾಯಿಸಿದ್ದಲ್ಲದೆ ಆಕೆಯನ್ನು ಅಪಹರಿಸಿ ಸಂಬಂಧಿಕರ ಮನೆಯಲ್ಲಿ ಕೂಡಿ ಹಾಕಿ ಅತ್ಯಾಚಾರ ಎಸಗಿದ್ದಾರೆ ಮತ್ತು ಚಿತ್ರಹಿಂಸೆ ನೀಡಿದ್ದಾರೆ. ಈ ಕುರಿತು ಪೊಲೀಸ್ ದೂರು ನೀಡದಂತೆ ಸಂತ್ರಸ್ತೆಯ ಪೋಷಕರಿಗೆ ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಸಂತ್ರಸ್ತ ಬಾಲಕಿಯನ್ನು ರಕ್ಷಿಸಿ ಸಿಂಧನೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.