ರಾಯಚೂರು/ಹಟ್ಟಿ ಚಿನ್ನದ ಗಣಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಂಪನಿಯ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ವತಿಯಿಂದ ಹಮ್ಮಿಕೊಂಡಿರುವ ಸರದಿ ಉಪವಾಸ ಸತ್ಯಾಗ್ರಹ ಮಂಗಳವಾರ ಎರಡನೇ ದಿನವೂ ಮುಂದುವರಿಯಿತು.

ಎರಡನೇ ದಿನದ ಉಪವಾಸ ಸತ್ಯಾಗ್ರಹದಲ್ಲಿ ಸಂಘದ ಕಾರ್ಯದರ್ಶಿ ಮುಹಮ್ಮದ್‌ ಹನೀಫ್, ಮೈನುದ್ದೀನ್ ಮಾಲಗತ್ತಿ, ವೆಂಕಟೇಶ್ ಗೂರ್ಕಲ್, ಮೈನುದ್ದೀನ್, ಎಲ್‌ಎಚ್‌ಡಿ ಆಪರೇಟರ್ ಹನುಮಂತರಾಯ ಹೆಬ್ಬಾಳ್, ಎಂ.ಎಸ್.ಮಂಜುನಾಥ ಸೇರಿದಂತೆ ಹಲವು ಕಾರ್ಮಿಕರು ಭಾಗವಹಿಸಿದರು.

ಇದೇ ವೇಳೆ ಅಖಿಲ ಭಾರತ ಜನವಾದಿ ಮಹಿಳಾ ಸಂಘದ ಸದಸ್ಯೆಯರಾದ ವನಜಾಕ್ಷಿ, ರಜಿಯಾಬೇಗಂ, ದುರುಗಮ್ಮ, ಭಾರತಿ, ಲಕ್ಷ್ಮಿ, ಗಾಯತ್ರಿ ಹಾಗೂ ಹುಲಿಗೆಮ್ಮ ಅವರು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಕಾರ್ಮಿಕರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಸತ್ಯಾಗ್ರಹ ಸ್ಥಳದಲ್ಲಿ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಕಾರ್ಮಿಕರ ನ್ಯಾಯಸಮ್ಮತ ಬೇಡಿಕೆಗಳು ಈಡೇರುವವರೆಗೆ ಒಗ್ಗಟ್ಟಿನಿಂದ ಹೋರಾಟ ಮುಂದುವರಿಸುವ ಸಂಕಲ್ಪ ವ್ಯಕ್ತಪಡಿಸಿದರು.

ಕಾರ್ಮಿಕರ ಬೇಡಿಕೆಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಈಡೇರಿಸಬೇಕು ಎಂದು ಸಂಘದ ಮುಖಂಡರು ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor