Raichur | ಆರೋಗ್ಯ ಇಲಾಖೆ: ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ
ರಾಯಚೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ) ಹಾಗೂ ಪಿಎಂ–ಅಭೀಮ್ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ‘ನಮ್ಮ ಕ್ಲಿನಿಕ್’ ಕೇಂದ್ರಗಳಿಗಾಗಿ 2026–27ನೇ ಸಾಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನೇಮಕಾತಿಯಡಿ ಎಂ.ಬಿ.ಬಿ.ಎಸ್. ವೈದ್ಯರು – 5, ಸ್ಟಾಫ್ ನರ್ಸ್ – 5, ಲ್ಯಾಬ್ ಟೆಕ್ನೀಷಿಯನ್ – 3, ಕಿರಿಯ ಆರೋಗ್ಯ ಸಹಾಯಕರು (ಮಹಿಳೆ) / ಪಿ.ಎಚ್.ಸಿ.ಒ./ಎಎನ್‌ಎಂ – 20, ಔಷಧ ವಿತರಕರು – 1 ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ (ಎಚ್‌ಐಒ) – 1 ಸೇರಿದಂತೆ ಒಟ್ಟು 35 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 17ರ ಸಂಜೆ 5.30ರೊಳಗೆ ರಾಯಚೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಯೋಜನಾ ನಿರ್ವಹಣಾ ಘಟಕದ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿರುವ ಜಿಲ್ಲಾ ಯೋಜನಾ ನಿರ್ವಹಣಾ ಘಟಕವನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಅಲ್ಲದೇ 9449843121 ಹಾಗೂ 9844193931 ದೂರವಾಣಿ ಸಂಖ್ಯೆಗಳಿಗೂ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.