ಲಿಂಗಸುಗೂರು: ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರ ನಾಗಪ್ಪ ವಜ್ಜಲ್ ಅವರ ಪುತ್ರ ಮಲ್ಲು ವಜ್ಜಲ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ರಭಸಕ್ಕೆ ವಾಹನ ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯರು ಗಾಯಾಳುವನ್ನು ಕೂಡಲೇ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಲ್ಲು ವಜ್ಜಲ್ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor