ರಾಯಚೂರು | ಜಿ.ಪಂ ಆವರಣದಲ್ಲಿ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಅವರಿಂದ ಅಕ್ಕ ಕೆಫೆ ಉದ್ಘಾಟನೆ
ರಾಯಚೂರು: ರಾಯಚೂರಿನ ಜಿಲ್ಲಾ ಪಂಚಾಯತ್ ಆವರಣದಲ್ಲಿ ಆರಂಭವಾದ ಅಕ್ಕ ಕೆಫೆ ಉಪಾಹಾರ ಗೃಹವನ್ನು ರಾಯಚೂರು ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಶುಕ್ರವಾರ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ವಿಧಾನ ಪರಿಷತ್ ಶಾಸಕರಾದ ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಯಚೂರು ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಸಭೆಯಲ್ಲಿ ಇದ್ದರು.