×
Ad

ರಾಯಚೂರು | ಮಾಜಿ ಸೈನಿಕರ ಸಂಘದ ಕಾರ್ಯಾಲಯ ಉದ್ಘಾಟನೆ

Update: 2025-09-04 18:52 IST

ರಾಯಚೂರು : ರಾಯಚೂರು ಮಹಾನಗರ ಪಾಲಿಕೆಯ ಹಳೆಯ ನಗರಸಭೆಯ ಕಟ್ಟಡದಲ್ಲಿ ಮಾಜಿ ಸೈನಿಕರ ಸಂಘದ ಕಾರ್ಯಾಲಯವನ್ನು ಪಾಲಿಕೆಯ ಮಹಾಪೌರರಾದ ನರಸಮ್ಮ ನರಸಿಂಹಲು ಮಾಡಿಗಿರಿ ಅವರು ಸೆ.4ರಂದು ಉದ್ಘಾಟಿಸಿದರು.

ಈ ವೇಳೆ ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಸಾಜೀದ್‌ ಸಮೀರ್‌ ಅವರು ಮಾತನಾಡಿ, ಮಾಜಿ ಸೈನಿಕರ ಸಂಘಕ್ಕೆ ನಿಯಮದಡಿಯಲ್ಲಿ ಮಹಾನಗರ ಪಾಲಿಕೆಯ ಸೌಲಭ್ಯಗಳನ್ನು ಒದಗಿಸಲಾಗುವುದು. ನಿಯಮದಡಿ ಅವಕಾಶವಿಲ್ಲದಿದ್ದಲ್ಲಿ ಸರ್ವ ಸದಸ್ಯರ ಸಹಕಾರ ಪಡೆದು ಬೇಡಿಕೆ ಈಡೇರಿಸಲಾಗುವುದು ಎಂದು ತಿಳಿಸಿದರು.

ಈ ವೇಳೆ ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಸಂತೋಷ ರಾಣಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಎನ್.ಸಿ.ಸಿ ಕಮಾಂಡೆಂಟ್ ಅಧಿಕಾರಿಗಳು, ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷರು ಸೇರಿದಂತೆ ವಿವಿಧ ಪದಾಧಿಕಾರಿಗಳು, ಮಾಜಿ ಸೈನಿಕರ ಕುಟುಂಬದ ಸದಸ್ಯರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News