×
Ad

ರಾಯಚೂರು | ಸಂಗೊಳ್ಳಿ ರಾಯಣ್ಣರ ನಾಮಫಲಕಕ್ಕೆ ಅವಮಾನ : ಪ್ರಕರಣ ದಾಖಲು

Update: 2025-08-30 22:38 IST

ರಾಯಚೂರು : ಸಂಗೊಳ್ಳಿ ರಾಯಣ್ಣರ ಭಾವಚಿತ್ರವುಳ್ಳ ನಾಮಫಲಕಕ್ಕೆ ದುಷ್ಕರ್ಮಿಗಳು ಸೆಗಣಿ ಎರಚಿ ಅಪಮಾನ ಮಾಡಿದ ಘಟನೆ ಜಿಲ್ಲೆಯ ಕವಿತಾಳ ಪಟ್ಟಣದ ಸಮೀಪದ ಉಟಕನೂರು ಗ್ರಾಮದಲ್ಲಿ ನಡೆದಿದೆ.

ದುಷ್ಕರ್ಮಿಗಳು ಸಂಗೊಳ್ಳಿ ರಾಯಣ್ಣರ ನಾಮಫಲಕಕ್ಕೆ ಸೆಗಣಿ ಎರಚಿ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಗ್ರಾಮಸ್ಥರು ಕವಿತಾಳ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಘಟನೆ ತಿಳಿದು ಸಿಪಿಐ ಶಶಿಕಾಂತ ಮತ್ತು ಪಿಎಸ್ಐ ಗಂಗಪ್ಪ ಬುರ್ಲಿ ಅವರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News